2020-21 ನೇ ಸಾಲಿನ ಹಾವೇರಿ ತಾಲೂಕಿನ ಗುತ್ತಲ ರೈತ ಸಂಪರ್ಕ ಕೇಂದ್ರಗಳ ಮೂಲಕ ಕೃಷಿ ಇಲಾಖೆಯ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ರೈತರಿಗೆ ತಾಡಪತ್ರಿಗಳನ್ನು ವಿತರಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಅಧಿಕಾರಿ ಪುಟ್ಟರಾಜ ಹಾವನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಡಪತ್ರಿಗಳನ್ನು ಪಡೆಯಲಿಚ್ಚಿಸುವ ರೈತರು ಆಧಾರ್ ಕಾರ್ಡ್, ಜಮೀನಿನ ಉತಾರ, ಬ್ಯಾಂಕ್ ಪಾಸ್‍ಬುಕ್ ಹಾಗೂ ಜಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಯೊಂದಿಗೆ ಅರ್ಜಿಗಳನ್ನು ಏಪ್ರೀಲ್ 19 ರೊಳಗಾಗಿ ಪಟ್ಟಣದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು. ಕಾರಣ ರೈತರು ಸದರಿ ಯೋಜನೆಯಡಿ ಸವಲತ್ತನ್ನು ಪಡೆಯಬಹುದು.
ಈ ಹಿಂದೆ ತಾಡಪತ್ರಿಗಳನ್ನು ಪಡೆದ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತಾಡಪತ್ರಿಗಳನ್ನು ಲಾಟರಿ ಎತ್ತುವ ಮೂಲಕ ಆಯ್ಕೆ ನಡೆಯುತ್ತಿದ್ದು 21-04-2021 ರಂದು ಸಂಬಂಧಪಟ್ಟ ರೈತ ಸಂಫರ್ಕ ಕೇಂದ್ರಗಳಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ರೈತ ಫಲಾನುಭವಿಗಳಿಗೆ ದಿನಾಂಕ 23-04-2021 ರಿಂದ ದಿನಾಂಕ 30-04-2021 ರವರೆಗೆ ಹಂಚಿಕೆ ಮಾಡಲಾಗವುದು. ಹಂಚಿಕೆ ಮಾಡುವ ಕೊನೆಯ ದಿನಾಂಕದೊಳಗೆ ಆಯ್ಕೆಯಾದ ಫಲಾನುಭವಿಗಳು ತಮ್ಮ ತಾಡಪತ್ರಿಗಳನ್ನು ತೆಗೆದುಕೊಂಡು ಹೋಗತಕ್ಕದ್ದು, ಇಲ್ಲವಾದಲ್ಲಿ ಅವಶ್ಯಕತೆ ಇದ್ದ ರೈತರಿಗೆ ಹಂಚಿಕೆ ಮಾಡಲಾಗುವುದು. ಲಾಟರಿ ಎತ್ತುವ ದಿನಾಂಕದಂದು ಅರ್ಜಿ ನೀಡಿದ ಎಲ್ಲ ರೈತರು ತಪ್ಪದೇ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಳಂದ ತಾಲೂಕಿನಲ್ಲಿ ತಾಡಪತ್ರಿಗೆ ಅರ್ಜಿ ಸಲ್ಲಿಸಲು ಏಪ್ರೀಲ್ 15 ಕೊನೆಯ ದಿನ
ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಟಾರ್ಪಲಿನ್ (ತಾಡಪತ್ರಿ) ಗಾಗಿ ಆಳಂದ ತಾಲೂಕಿನ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಆಳಂದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ, ಹಾಗೂ ಇತರೆ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಆಹಾರ ಧಾನ್ಯಗಳ ಮತ್ತು ಕೃಷಿ ಉತ್ಪನಗಳ ಗುಣಮಟ್ಟ ಕಾಯ್ದುಕೊಳಲು ಅನೂಕುಲವಾಗುವಂತೆ (ತಾಡಪತ್ರಿ) ಟಾರ್ಪಲಿನಗಳನ್ನು ವಿತರಿಸಲಾಗುತ್ತಿದೆ. ಸಾಮಾನ್ಯ ರೈತರಿಗೆ ಶೇ.50 ರ ಸಹಾಯಧನದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರ ಸಹಾಯಧನದಲ್ಲಿ ವಿತರಿಸಲಾಗುತ್ತಿದೆ.
ಅರ್ಹ ರೈತರು ತಮಗೆ ಸಂಬಂಧಪಟ್ಟ ಆಳಂದ, ಖಜೂರಿ, ಮಾ.ಹಿಪ್ಪರಗಾ, ನರೋಣಾ ಹಾಗೂ ನಿಂಬರ್ಗಾ ರೈತರ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರ ದಾಖಲಾತಿಯೊಂದಿಗೆ ಏಪ್ರಿಲ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಇಲಾಖೆಯಿಂದ ಕಳೆದ 3 ವರ್ಷಗಳಲ್ಲಿ ತಾಡಪತ್ರಿ ಪಡೆದ ರೈತರು ಅರ್ಜಿ ಸಲ್ಲಿಸಲು ಅರ್ಹ ಇರುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.