News

ಮಹಿಳೆಯರಿಗೆ ಸಿಹಿಸುದ್ದಿ: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ..ಇಂದೇ ಅರ್ಜಿ ಸಲ್ಲಿಸಿ

08 January, 2023 5:15 PM IST By: KJ Staff

ದೇಶದ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಸರ್ಕಾರ “ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ”ಯಡಿ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದೆ.

ದೇಶದ ಮಹಿಳೆಯರು ಸಬಲರಾಗಬೇಕೆಂಬುದು ಸರ್ಕಾರದ ಪ್ರಯತ್ನ. ಮಹಿಳೆಯರನ್ನು ಸ್ಕ್ಯಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಪಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಚಾಲನೆ ನೀಡಿದೆ.

ಈ ಯೋಜನೆಯಡಿ ದೇಶದ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿಯವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿಯನ್ನು ಸಲ್ಲಿಸುವ ಮೂಲಕ ಪಡೆಯಬಹುದು.

ಯಾರು ಅರ್ಹರು..?

ದೇಶದ ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗಾಗಿ ಕೇಂದ್ರ ಸರ್ಕಾರದ ಈ ಯೋಜನೆ ಸಿದ್ಧಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳಾಗಿರಬೇಕು. ಅರ್ಜಿ ಸಲ್ಲಿಸಿದ ನಂತರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ದೊರೆಯಲಿದೆ.

ಯಾವ ಯಾವ ರಾಜ್ಯಗಳಲ್ಲಿ  ಯೋಜನೆ ಜಾರಿಯಲ್ಲಿದೆ

PM ಉಚಿತ ಹೊಲಿಗೆ ಯಂತ್ರ ಯೋಜನೆ ಪುಸ್ತುತ ದೇಶದ ಕೆಲವೇ ರಾಜ್ಯಗಳಲ್ಲಿ ಚಾಲನೆಯಲ್ಲಿದೆ. ಈ ರಾಜ್ಯಗಳಲ್ಲಿ ಕರ್ನಾಟಕ, ಹರಿಯಾಣ, ಗುಜರಾತ್, ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ,  ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡ್‌ ರಾಜ್ಯಗಳಲ್ಲಿ ಮಾತ್ರ ಚಾಲ್ತಿ ಇದೆ. ಈ ರಾಜ್ಯಗಳ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.


ಅರ್ಜಿ ಸಲ್ಲಿಕೆ ಹೇಗೆ..?

ಸದ್ಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನ ಹೊಲಿಗೆ ಯಂತ್ರ ವಿತರಣೆಯ ಪ್ರಕಟಣೆಯನ್ನು  ರಿಲೀಸ್‌ ಮಾಡಲಾಗಿದೆ.

ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

̧ಅರ್ಜಿ ಸಲ್ಲಿಸಲು ಫೆಬ್ರವರಿ 20 – 2023 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್-

www.dbcdc.karnataka.gov.in  ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.