ಪ್ರಸಕ್ತ 2021-22ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ (ರೈತರ ಮಕ್ಕಳಿಗೆ) ಪುರುಷ ಅಭ್ಯರ್ಥಿಗಳಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಈ ತೋಟಗಾರಿಕೆ ತರಬೇತಿಯು 2021ರ ಮೇ 3 ರಿಂದ ಪ್ರಾರಂಭವಾಗಲಿದೆ. ಈ ತರಬೇತಿ ಪಡೆಯುವ ಅಭ್ಯರ್ಥಿಗಳ (ತಂದೆ/ತಾಯಿ/ ಪೋಷಕರು) ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಕುರಿತು ಕಡ್ಡಾಯವಾಗಿ ಪಹಣಿ ನೀಡಬೇಕು. ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ಕನ್ನಡ ವಿಷಯಗಳೊಂದಿಗೆ ಪಾಸಾಗಿರಬೇಕು. ದೃಢಕಾಯವಾಗಿರಬೇಕು, ವಯೋಮಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ ವಯೋಮಿತಿ 18 ರಿಂದ 33 ವರ್ಷದೊಳಗಿರಬೇಕು ಹಾಗೂ ಇತರರಿಗೆ ವಯೋಮಿತಿ ಕನಿಷ್ಠ 18 ರಿಂದ 30 ವರ್ಷದೊಳಗಿರಬೇಕು.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ https://horticulturedir.karnataka.gov.in ವೆಬ್‍ಸೈಟ್‍ದಿಂದ ಏಪ್ರಿಲ್ 17 ರೊಳಗಾಗಿ ಡೌನ್‍ಲೋಡ್ ಮಾಡಿಕೊಳ್ಳಬೇಕು ಅಥವಾ ಜಿಲ್ಲೆಯ ಆಯಾ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ.)/, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಹಾಗೂ ಆಯಾ ತಾಲೂಕಿನ ತಾಲೂಕಿನ ತೋಟಗಾರಿಕೆ ಕಚೇರಿಯಿಂದ ಕಚೇರಿ ಸಮಯದಲ್ಲಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದೃಢೀಕರಣ ಪ್ರಮಾಣಪತ್ರಗಳೊಂದಿಗೆ ಎರಡು ಪಾಸ್‍ಪೋರ್ಟ್ ಅಳತೆಯ ಫೋಟೋ ಲಗತ್ತಿಸಿ ಕಲಬುರಗಿ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ.)/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕಚೇರಿಯಲ್ಲಿ 2021ರ ಏಪ್ರಿಲ್ 17ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿ ಶುಲ್ಕ ಹಾಗೂ ಮತ್ತಿತರರ ಹೆಚ್ಚಿನ ಮಾಹಿತಿಯನ್ನು ಕಲಬುರಗಿ ಐವಾನ್‍ಶಾಹಿ ರಸ್ತೆಯಲ್ಲಿರುವ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-229479ಗೆ ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಲಬುರಗಿ ಐವಾನ್‍ಶಾಹಿ ರಸ್ತೆಯಲ್ಲಿರುವ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ.) ಕಚೇರಿಯಲ್ಲಿ 2021ರ ಏಪ್ರಿಲ್ 20 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.