2023-24 ನೇ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿನ 04 ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆಗಳ 6ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಅರ್ಜಿ ಅಹ್ವಾನಿಸಲಾಗಿದೆ.
5ನೇ ತರಗತಿ ಪಾಸಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (ಒಬಿಸಿ) ಶೇ.25 ಸೀಟುಗಳು ಲಭ್ಯವಿದೆ.
ಧಾರವಾಡ ಜಿಲ್ಲೆಯಲ್ಲಿರುವ ಪಿ.ಎಚ್.ಕ್ಯೂ ಆವರಣ ಧಾರವಾಡ, ನವನಗರ ಹುಬ್ಬಳ್ಳಿ, ಸದಾಶಿವನಗರ ಹುಬ್ಬಳ್ಳಿ ಹಾಗೂ ನವಲಗುಂದ ಇಲ್ಲಿನ ಮೌಲಾನಾ ಆಜಾದ ಮಾದರಿ ಶಾಲೆಯಗಳಿಗೆ ಪ್ರವೇಶಕ್ಕಾಗಿ ಆಸಕ್ತ ವಿದ್ಯಾರ್ಥಿಗಳು ಮೇ. 15 ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೆ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಲು ಉಚಿತ ಸೇವೆ ಪಡೆಯಲು ಸಮೀಪದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ಆಯಾ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ ಧಾರವಾಡ.-0836-2971590, ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆ ಪಿ.ಎಚ್.ಕ್ಯೂ ಆವರಣ ಧಾರವಾಡ-9886383284, 8095052640, ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆ ನವನಗರ ಹುಬ್ಬಳ್ಳಿ-9743404329, ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆ ಸದಾಶಿವನಗರ ಹುಬ್ಬಳ್ಳಿ-9480407898, ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆ ನವಲಗುಂದ-8497847789
ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರಗಳು:
ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರ ಧಾರವಾಡ.-9738287549, ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರ ಹುಬ್ಬಳ್ಳಿ-8867718261, ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರ ನವಲಗುಂದ-8746894524 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.