1. ಸುದ್ದಿಗಳು

ರೈತರೆ ಗಮನಿಸಿ; ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ !

Kalmesh T
Kalmesh T
Application invitation for subsidy from Horticulture Department!

ತೋಟಗಾರಿಕೆ ಇಲಾಖೆಯು ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತ ರೈತರು ಕೂಡಲೇ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿರಿ: ಗುಡ್‌ನ್ಯೂಸ್‌: ಇಲ್ಲಿದೆ ರೈತರ ಮಕ್ಕಳಿಗೆ 50% ಮೀಸಲಾತಿ; ಏನಿದು ಗೊತ್ತೆ?

ಶಿವಮೊಗ್ಗದ ತಾಲ್ಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ “ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ ವಿಸ್ತರಣೆ, ತರಕಾರಿ ಬೆಳೆಗಳಲ್ಲಿ ಪ್ಲಾಸ್ಟಿಕ್ ಹೊದಿಕೆ,

2022 ರಲ್ಲಿ 144.67 ಲಕ್ಷ ಟನ್‌ ಆಹಾರ ಧಾನ್ಯ ಉತ್ಪಾದನಾ ಗುರಿ!

ಪಾಲಿಹೌಸ್ ಮತ್ತು ಶೇಡ್ ನೆಟ್ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಮಿನಿ ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ, ಪ್ಯಾಕ್‍ಹೌಸ್ ನಿರ್ಮಾಣ ಹಾಗೂ ಪ್ರಾಥಮಿಕ ಸಂಸ್ಕರಣಾ ಘಟಕ ನಿರ್ಮಾಣ ಇತ್ಯಾದಿ ಸೌಲಭ್ಯಗಳಿಗೆ ಅವಕಾಶವಿದ್ದು,

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ:20/07/2022 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದೆ.

ಬ್ರೇಕಿಂಗ್‌; 276 ಕಳಪೆ ಬೀಜ ವಿತರಣೆ ಪ್ರಕರಣ ದಾಖಲು, 416 ಪರವಾನಗಿ ರದ್ದು!

ಸಹಾಯಧನ ಪಡೆಯುವಲ್ಲಿ ಬೇಕಾದ ಎಲ್ಲ ರೀತಿಯ ಮಾಹಿತಿಗಳಿಗಾಗಿ ನೀವು ತಾಲೂಕು ತೋಟಗಾರಿಕೆ ಇಲಾಖೆ ಕಚೇರಿಯ ಮೊಬೈಲ್‌ ಸಂಖ್ಯೆ 08182-279415 ನ್ನು ಸಂಪರ್ಕಿಸಬಹುದು

Published On: 08 July 2022, 12:17 PM English Summary: Application invitation for subsidy from Horticulture Department!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.