1. ಸುದ್ದಿಗಳು

loan ಸಾಲ ಸೌಲಭ್ಯ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

Hitesh
Hitesh
Application invitation from candidates to get loan facility!

ಸರ್ಕಾರವು ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತದ  ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ,

ಗಂಗಾ ಕಲ್ಯಾಣ ನೀರಾವರಿ  ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ 

ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ  ಸಹಯೋಗದೊಂದಿಗೆ) ಮತ್ತು ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ

ಸೌಲಭ್ಯ ಪಡೆಯಲು ಮಡಿವಾಳ ಸಮುದಾಯ ಹಾಗೂ ಆದರ ಉಪ ಜಾತಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ 

ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.  

ಅರ್ಜಿದಾರರು  ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.

ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು.

ವಯೋಮಿತಿ 18 ವರ್ಷಗಳಿಂದ  55 ವರ್ಷಗಳ ಮಿತಿಯಲ್ಲಿರಬೇಕು.

ನಿಗಮದ / ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು ಎಂದು ಷರತ್ತು ವಿಧಿಸಲಾಗಿದೆ.  

ಆಸಕ್ತರು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್- ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ 

ಆಲ್‌ಲೈನ್‌ನ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು  ನವೆಂಬರ್ 03ರ ಒಳಗಾಗಿ ಸಲ್ಲಿಸಬಹುದು.

ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು ಇಲಾಖೆ ಮಾಹಿತಿ ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ

ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ 

ಬೆಂಗಳೂರು-32 ಅಥವಾ ನಿಗಮದ  ವೈಬ್ ಸೈಟ್  www.kmmd.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿಯ

ದೂರವಾಣಿ / ಸಹಾಯವಾಣಿ  ಸಂಖ್ಯೆ: 080-22374832, 8050770004, 8050770005 ಅಥವಾ ಡಿ.ದೇವರಾಜ ಅರಸು ಹಿಂದುಳಿದ

ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತಬೆಂಗಳೂರು ಉತ್ತರ ಜಿಲ್ಲಾ  ಕಛೇರಿಯ ದೂರವಾಣಿ ಸಂಖ್ಯೆ 080-23539600/ 23539601ಗೆ

ಸಂಪರ್ಕಿಸಬಹುದು ಎಂದು ಬೆಂಗಳೂರು  ಉತ್ತರ ಜಿಲ್ಲೆಯ ಕರ್ನಾಟಕ ಮಾಡಿವಾಳ ಮಾಚಿದೇವ

ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Published On: 16 October 2023, 12:51 PM English Summary: Application invitation from candidates to get loan facility!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.