1. ಸುದ್ದಿಗಳು

ಉಚಿತ ಹೊಲಿಗೆ ತರಬೇತಿ ನೀಡಲು ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನ

Ramlingam
Ramlingam
sewing training

ವಿಜಯಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹಾವೇರಿ  ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗೆ 30 ದಿನಗಳ ಹೋಲಿಗೆ ತರಬೇತಿ ಹಾಗೂ 13 ದಿನಗಳ ಜೂಟ್ ಬ್ಯಾಗ್ ಮೇಕಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಜಯಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹಾವೇರಿ  ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗೆ 30 ದಿನಗಳ ಹೋಲಿಗೆ ತರಬೇತಿ ಹಾಗೂ 13 ದಿನಗಳ ಜೂಟ್ ಬ್ಯಾಗ್ ಮೇಕಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷದೊಳಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿಯೊಂದಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ರೇಶನ ಕಾರ್ಡ, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅರ್ಜಿಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ- ಹಾವೇರಿ. ಡಿ.ಸಿ.ಆಫೀಸ್ ಕಟ್ಟಡದ ಹಿಂಭಾಗ  ದೇವಗಿರಿ. ದೂರವಾಣಿ ಸಂಖ್ಯೆ 08375-249160ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಅರ್ಜಿ ಆಹ್ವಾನ

ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಎಂಒಎಫ್‍ಪಿಐ) ವು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಪಾಲುದಾರಿಕೆಯೊಂದಿಗೆ ಕಿರು ಸಂಸ್ಕರಣಾ ಉದ್ದಿಮೆಗಳ ಉನ್ನತೀಕರಣಕ್ಕಾಗಿ ಹಣಕಾಸು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲ ಒದಗಿಸಲು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಪ್ರಾರಂಭಿಸಿದೆ ಎಂದು ಕಲಬುರಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.

 ಕಲಬುರಗಿ ಜಿಲ್ಲೆಯಲ್ಲಿ ಒಂದು ಉತ್ಪನ್ನದಡಿ ತೊಗರಿ ಬೆಳೆ ಆಯ್ಕೆಯಾಗಿರುತ್ತದೆ. ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕಾಗಿ ಸಹಾಯಧನ ಬೆಂಬಲ ಶೇ. 35 ರಷ್ಟು ಸಾಲ ಸಂಪರ್ಕಿತ ಅನುದಾನ ನೀಡಲಾಗುತ್ತಿದೆ. ಒಂದು ಉತ್ಪನ್ನದಡಿ ಆಯ್ಕೆಯಾದ ತೊಗರಿ ಬೆಳೆ ಹಾಗೂ ಇತರೆ ಯಾವುದೇ ಆಹಾರ ಬೆಳೆಗಳ ಸಂಸ್ಕರಣಾ ಘಟಕಗಳಿಗಾಗಿ ಆಸಕ್ತಿಯುಳ್ಳ ಉದ್ದಿಮೆದಾರರು ಪಿಎಂಎಫ್‍ಎಮ್‍ಇ ವೆಬ್‍ಸೈಟ್‍ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಸಹಾಯ ಗುಂಪುಗಳು, ಸಹಕಾರ ಸಂಘಗಳು ಹಾಗೂ ರೈತ ಉತ್ಪಾದಕ ಸಂಘಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 ಮತ್ತಿತರ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು http://pmfme.mofpi.gov.in   ವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Share your comments

Top Stories

View More

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.