News

ಅರಣ್ಯ ಇಲಾಖೆಯಲ್ಲಿ 540 ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

04 December, 2023 3:54 PM IST By: Maltesh

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ 540 ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ 'ಅರಣ್ಯ ರಕ್ಷಕ) ಗ್ರೂಪ್ 'ಸಿ' ಹುದ್ದೆಗಳಿಗೆ ನೇರ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಾವಳಿ 2021 ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: FEE 203 FEG 2015 ದಿನಾಂಕ: 06.08.2019ರಲ್ಲಿ ಅಧಿಸೂಚಿತ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು,

2019ರನ್ವಯ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (=506 ಸರ್ಕಾರವು ಅನುಮತಿಸಿರುವ ಹುದ್ದೆಗಳು + 34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ 'ಅರಣ್ಯ ರಕ್ಷಕ) ಗ್ರೂಪ್ 'ಸಿ' ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 01.12.2023 ರಿಂದ ದಿನಾಂಕ: 30.12.2023 ರವರೆಗೆ ಸಲ್ಲಿಸಲು ಅವಕಾಶವಿದ್ದು, ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ದಿನಾಂಕ: 05.01.2024ನ್ನು ನಿಗದಿಪಡಿಸಲಾಗಿರುತ್ತದೆ. ಈ ವಿಧಾನವನ್ನು ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಆನ್‌ಲೈನ್‌ ಅರ್ಜಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಜಾಲತಾಣ https://aranya.gov.in ಮುಖಪುಟದ ಕೆಳಭಾಗದಲ್ಲಿ ಇರುವ “ನೇಮಕಾತಿ” ಶೀರ್ಷಿಕೆಯಡಿ ನೋಡಬಹುದು.