1. ಸುದ್ದಿಗಳು

ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗಳಲ್ಲಿ 7, 8 ಹಾಗೂ 9ನೇ ತರಗತಿಗಳಲ್ಲಿ ಕಾರಣಾಂತರಗಳಿಂದ ಖಾಲಿಯಿರುವ ಸ್ಥಾನಗಳಿಗೆ ಪ್ರವೇಶ ಪಡೆಯಲು ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಕುರಿತು ಕಮಲಾಪುರ (ಡಯಟ್) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆದರ್ಶ ಶಾಲೆಯಿರುವ ತಾಲೂಕಿನ ನಿವಾಸಿಯಾಗಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಆಯಾ ತಾಲೂಕಿನ ಆದರ್ಶ ವಿದ್ಯಾಲಯದಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ವ್ಯಾಸಂಗ ಮಾಡುತ್ತಿರುವ ಶಾಲೆಯ ದೃಢೀಕರಣ ಪತ್ರ, ಆಧಾರ ಕಾರ್ಡ್ ಜೆರಾಕ್ಸ್‌ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರಗಳ ದಾಖಲಾತಿಗಳೊಂದಿಗೆ 2020ರ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಆಯಾ ಆದರ್ಶ ವಿದ್ಯಾಲಯ ಶಾಲೆಗಳಲ್ಲಿ 2020ರ ಡಿಸೆಂಬರ್ 18 ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ಕಮಲಾಪುರ ಡಯಟ್ ಉಪನ್ಯಾಸಕರಾದ ಗೋದಾವರಿ ಪಾಟೀಲ್ ಇವರ ಮೊಬೈಲ್ ಸಂಖ್ಯೆ 9535211542 ಗೆ ಸಂಪರ್ಕಿಸಲು ಕೋರಲಾಗಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.