ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಮಹಾವಿದ್ಯಾಲಯಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 40ರಷ್ಟು ಮೀಸಲಾತಿ ಇದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ, ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ವಿಜ್ಞಾನಿಗಳು ಬೋಧಿಸುತ್ತಾರೆ.
ಅರ್ಜಿಯನ್ನು ಇದೇ 21ರಿಂದ ಸೆಪ್ಟೆಂಬರ್ 8ರವರೆಗೆ www.uahs.edu.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು. ಭರ್ತಿ ಮಾಡಿದ ಅರ್ಜಿ, ನಿಗದಿತ ಶುಲ್ಕವನ್ನು ಡಿಡಿ ರೂಪದಲ್ಲಿ ಲಗತ್ತಿಸಿ ಕಳುಹಿಸಿಕೊಡಬಹುದು. ಅರ್ಜಿ ಸಲ್ಲಿಸಲು ಸೆ. 15 ಕೊನೆಯ ದಿನಾಂಕ ಎಂದು ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ
Share your comments