ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ (ನೋಂದಾಯಿತ ಮಹಿಳಾ ಸ್ವ-ಸಹಾಯ ಸಂಘದವರಿಗೆ), ಭೂ ಒಡೆತನ ಯೋಜನೆ ಹಾಗೂ ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದಲ್ಲದೇ ಪರಿಶಿಷ್ಟ ಪಂಗಡದಲ್ಲಿ ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಹಾಗೂ ಆದಿವಾಸಿ ಜನಾಂಗದವರಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಾದ ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ ಹಾಗೂ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಹಾಗೂ ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ (ನೋಂದಾಯಿತ ಮಹಿಳಾ ಸ್ವಸಹಾಯ ಸಂಘದವರಿಗೆ) ಗಳಡಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಜುಲೈ 30 ರಿಂದ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಆಗಸ್ಟ್ 25 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ ದಾಖಲಾತಿಗಳನ್ನು ನಿಗಮದ https://kmvstdcl.karnataka.gov.in ವೆಬ್‌ಸೆಟ್‌ದಲ್ಲಿ ಆಪ್‌ಲೋಡ್ ಮಾಡಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಐವಾನ್ ಶಾಹಿ ರಸ್ತೆಯಲ್ಲಿರುವ ಮಿನಿ ವಿಧಾನಸೌಧ ಎದುರಿಗೆಯಿರುವ ಸಮಾಜ ಕಲ್ಯಾಣ ಇಲಾಖೆಯ ನೆಲಮಹಡಿಯಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿಯನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ 08472-221331ಗೆ ಹಾಗೂ ನಿಗಮದ ವೆಬ್‌ಸೆಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.