ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ವತಿಯಿಂದ ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅ) ರಾಜ್ಯ ಮಟ್ಟದ ಪ್ರಶಸ್ತಿಗಳು
- ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
- ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
- ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ
- ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
- ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಪ್ರಶಸ್ತಿ
- ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತಮಹಿಳೆ ಪ್ರಶಸ್ತಿ
ಆ) ಜಿಲ್ಲಾ ಮಟ್ಟದ ಪ್ರಶಸ್ತಿಗಳು
- ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ
- ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ
ಇ) ತಾಲ್ಲೂಕು ಮಟ್ಟದ ಪ್ರಶಸ್ತಿಗಳು
- ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ
- ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ
ಮೇಲಿನ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್-2021ರಲ್ಲಿ ಆಯೋಜಿಸಲಿರುವ ಕೃಷಿಮೇಳ-2021ರ ಸಂದರ್ಭದಲ್ಲಿ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲೂ www.uasbangalore.edu.in ಲಭ್ಯವಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:31-07-2021 ರೊಳಗೆ ಸಲ್ಲಿಸಬೇಕು.
ದೂರವಾಣಿ ಸಂಖ್ಯೆ. 080-23330153, ಗೆ ಕರೆ ಮಾಡಿ ಸಂಪರ್ಕಿಸಬಹುದು. ಇನ್ನೂ ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ಸಂಪರ್ಕಿಸಬಹುದು.
Share your comments