News

ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರು ಪರಿಹಾರ ಧನ ಪಡೆಯಲು ಸೇವಾ ಸಿಂಧು ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

22 May, 2021 1:51 PM IST By:
Auto

ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ ಆಟೋ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಅವರಿಗೆ  ಪರಿಹಾರ ಧನವಾಗಿ 3 ಸಾವಿರ ರೂಪಾಯಿಗಳನ್ನು ಘೋಷಿಸಿ ಈಗ ಆನ್ ಲೈನ್ ಮೂಲಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್​ನಲ್ಲಿ "ಸೇವಾಸಿಂಧು" ವೆಬ್‌ ಪೋರ್ಟಲ್‌ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ಸೇವಾ ಸಿಂಧು ವೆಬ್ ಪೋರ್ಟಲ್ ಮುಖಾಂತರ ಸಲ್ಲಿಸಬೇಕಾಗಿ ಆರ್​ಟಿಒ ಕೋರಿದೆ.

 ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ರೂ.3,000ಗಳ ಪರಿಹಾರ ಧನವನ್ನು ನೀಡಲು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಿದೆ.

ಎಲ್ಲಾ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/  ಮೂಲಕವೇ ಸ್ವೀಕೃತವಾಗತಕ್ಕದ್ದು. ದಿನಾಂಕ 24-04-2021ರಂದು ಚಾಲ್ತಿಯಲ್ಲಿದ್ದ ಚಾಲನೆ ಪರವಾನಗಿ ಪ್ರಮಾಣಪತ್ರ ಹೊಂದಿರುವ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರುಗಳಿಗೆ ಮಾತ್ರ ಅನ್ವಯಿಸತಕ್ಕದ್ದು. ಒಂದು ವಾಹನಕ್ಕೆ ಒಬ್ಬ ಚಾಲಕರಂತೆ ಮಾತ್ರ ಈ ನಗದು ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಆಧಾರ್ ಕಾರ್ಡ್, ಚಾಲನಾ ಪರವಾನಗಿ, ವಾಹನ ನೋಂದಣಿ ಸಂಖ್ಯೆ ಫಲಾನುಭವಿಗಳಲ್ಲಿ ಕಡ್ಡಾಯವಾಗಿರ ಇರಬೇಕು. ಪರಿಹಾರ ಧನವು ಕೇವಲ ಚಾಲನೆ ಪರವಾನಗಿ ಪ್ರಮಾಣಪತ್ರವನ್ನು ಹೊಂದಿರುವ ಹಾಗೂ ಅಗತ್ಯವಿರುವ ಚಾಲಕರ ಬ್ಯಾಂಕ್ ಖಾತೆಗೆ DBT ಮುಖಾಂತರವೇ ಜಮೆ ಮಾಡಲಾಗುವುದು.

ಒಂದು ವೇಳೆ ಕೆಲವೊಂದು ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಮಾಲೀಕರು ಹೆಚ್ಚಿನ ಸಂಖ್ಯೆಯ ಆಟೋ, ಟ್ಯಾಕ್ಸಿ, ಮ್ಯಾಕ್ಸಿಗಳನ್ನು ಹೊಂದಿದ್ದು, ಅವರಿಗೆ ಪರಿಹಾರ ಧನ ಸಂದಾಯವಾದಲ್ಲಿ ಜೀವನ ನಿರ್ವಹಣೆಯನ್ನು ಎದುರಿಸುತ್ತಿರುವ ಚಾಲಕರಿಗೆ ಸಿಗದಂತೆಯಾಗುತ್ತದೆ. ಆದುದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುತ್ತಿದೆ, ನಿಜವಾದ ಫಲಾನುಭವಿಗಳ ಆಧಾರ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆಗೆ ಅಲಿಂಕ್ ಆಗಿರುವ ಬಗ್ಗೆ ಗಮನಹರಿಸಿ ವರ್ಗಾಯಿಸಲಾಗುವುದು.

ಮೇಲಿನ ಷರತ್ತು ಮತ್ತು ನಿಬಂಧನೆಗಳನ್ನು ಗಣನೆಗೆ ತೆಗೆದುಕೊಂಡು ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್  ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ನಮೂದಿಸಬೇಕು. ಚಾಲಕರ ಬ್ಯಾಂಕ್ ಖಾತೆ ವಿವರ, ಐಎಫ್.ಸಿ ಕೋಡ್, ಎಂಐಸಿಆರ್ ಕೋಡಿ ತಪ್ಪದೆ ಪೋರ್ಟಲ್ ನಲ್ಲಿ ನಮೂದಿಸಬೇಕು. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆಯನ್ನು ಸಹ ನಮೂದಿಸಬೇಕು. ಸೇಸಾವ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು  ಆಧಾರ್ ಸಂಖ್ಯೆಗೆ ಲಿಂಗ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.