2020-21ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ, ಕೊಳವೆ ಬಾವಿ ಮರುಪೂರಣ ಘಟಕ, ಈರುಳ್ಳಿ ಶೇಖರಣೆ ಘಟಕ, ಕೃಷಿ ಹೊಂಡ, ವೈಯಕ್ತಿಕ ಪೌಷ್ಠಿಕ ತೋಟಗಳ ನಿರ್ಮಾಣಕ್ಕಾಗಿ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸಹಾಯಧನ ಸೌಲಭ್ಯವಿರುವ ಕಾರಣ ಕ್ರಿಯಾ ಯೋಜನೆಯಡಿ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-278179 ಹಾಗೂ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಮಳೆಯಾಧಾರಿತ ಕೃಷಿ ಮಾಡುತ್ತಿರುವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಇಲಾಖೆಯ ಈ ಯೋಜನೆಯಡಿ ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿ ಹೊಂಡ ನಿರ್ಮಾಣ ರೈತರಿಗೆ ವರದಾನವಾಗಲಿದೆ.
ತಮ್ಮ ಜಮೀನಿನಲ್ಲಿ ಅನುಕೂಲಕ್ಕೆ ತಕ್ಕಂತೆ ಇಲಾಖೆ ನಿಗದಿ ಪಡಿಸಿದ ರೂಪದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ಸಹಿತ ಅನುದಾನ ಕೃಷಿ ಹೊಂಡ ನಿರ್ಮಾಣಕ್ಕೆ ಸಿಗುತ್ತದೆ.
ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವ ಮಳೆಯ ಪ್ರಮಾಣದಿಂದ ಮಳೆಯಾಧಾರಿತ ಕೃಷಿಯನ್ನು ನಂಬಿಕೊಂಡಿರುವ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಹೊಂಡಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಕೃಷಿಕರು ಮಳೆ ನೀರನ್ನು ವ್ಯರ್ಥವಾಗಲು ಬಿಡದೆ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ, ಅದನ್ನು ತಮ್ಮ ಬೆಳೆಗಳಿಗೆ ನೀರಾವರಿ ಒದಗಿಸಲು ಈ ಯೋಜನೆಯ ಉದ್ದೇಶವಾಗಿದೆ.ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ ಅಳವಡಿಕೆ, ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್‌ಸೆಟ್, ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗೆ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಸಹಾಯಧನ (ಸಬ್ಸಿಡಿ) ನೀಡಲಾಗುವುದು.