1. ಸುದ್ದಿಗಳು

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿಂದ ಕಲಬುರಗಿಯಲ್ಲಿ ನಡೆಸಲಾಗುತ್ತಿರುವ   ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಯಲ್ಲಿ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ (180 ದಿನಗಳಿಗೆ)  6 ತಿಂಗಳ  ಅವಧಿಗೆ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‘’ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ. 18 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ 400 ರೂ.ಗಳ ಶಿಷ್ಯವೇತನ ನೀಡಲಾಗುವುದು. 

ಅದೇ ರೀತಿ ನಿರುದ್ಯೋಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳ ಅವಧಿಗೆ (180 ದಿನಗಳ) ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’’  ತರಬೇತಿ ಸಹ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಅಭ್ಯರ್ಥಿಗಳಿಗೆ ಮಾಹೆಯಾನ 500 ರೂ.ಗಳ ಶಿಷ್ಯವೇತನವನ್ನು ನೀಡಲಾಗುತ್ತದೆ.

ಈ ತರಬೇತಿಯು 2021ರ ಜುಲೈ 1 ರಿಂದ ಪ್ರಾರಂಭವಾಗಲಿದ್ದು, ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಹಾಗೂ ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಬೀದರ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟ್ ಜಿಲ್ಲೆಗಳಲ್ಲಿನ ಜಿಲ್ಲಾ ಸಹಕಾರ ಯೂನಿಯನ್‌ಗಳಿಂದ ಪಡೆಯಬಹುದಾಗಿದೆ. ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶ ನಗರ, ಪ್ರಗತಿ ಕಾಲೋನಿ, ಸೇಡಂ ರಸ್ತೆ, ಕಲಬುರಗಿ-585105 ವಿಳಾಸಕ್ಕೆ ಕಳುಹಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ,ಕಲಬುರಗಿ-585 105 ವಿಳಾಸಕ್ಕೆ ಹಾಗೂ ಸಂಸ್ಥೆಯ ಕಚೇರಿ ದೂರವಾಣಿ ಸಂಖ್ಯೆ: 08472-245340, ಮೊಬೈಲ್ ಸಂಖ್ಯೆ 9742307153, 9916726886 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 29 June 2021, 09:53 PM English Summary: Application Invited for Diploma in Co-operative Management Training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.