1. ಸುದ್ದಿಗಳು

ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಅರ್ಹ ರೈತರಿಂದ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ 11 ಹಾಗೂ ಗಿರಿಜನ ಉಪಯೋಜನೆಯಡಿ 5 ಜನ ಸೇರಿ ಒಟ್ಟು 16 ಜನ ಫಲಾನುಭವಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವವರು ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರಬೇಕು. 18 ರಿಂದ 60 ವಯಸ್ಸಿನವರಾಗಿರಬೇಕು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಪಶು ಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿಗಳನ್ನು ಪಡೆದು 15 ದಿನಗಳೊಳಗಾಗಿ ಅರ್ಜಿ ಸಲ್ಲಿಸುವಂತೆ ರಾಜ್ಯ ಬಾಗಲಕೋಟೆಯ ಕುರಿ ಮತ್ತು ಉಣ್ಣೆ ಅಭಿವೈದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸಂಪರ್ಕಿಸಲು ಕೋರಲಾಗಿದೆ.

Published On: 09 October 2020, 10:03 PM English Summary: Application invited for establishment of sheep and goat unit

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.