ಕೋವಿಡ್-19ರ ಎರಡನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ 3,000 ರೂಪಾಯಿಗಳ ಅರ್ಥಿಕ ನೆರವನ್ನು ಘೋಷಿಸಲಾಗಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಲಾವಿದರು ವೃತ್ತಿನಿರತರಾಗಿದ್ದು, ವಯೋಮಿತಿ 35 ವರ್ಷ ಮೇಲ್ಪಟ್ಟವರಾಗಿರಬೇಕು. ಕನಿಷ್ಠ 10 ವರ್ಷಗಳ ಕಲಾ ಸೇವೆ ಮಾಡಿರಬೇಕು. (ಕಲಾವಿದರು ಕಲಾ ಸೇವೆ ಮಾಡಿರುವ ಕನಿಷ್ಟ ಒಂದು ಫೋಟೋ ಲಗತ್ತಿಸಬೇಕು). ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಹಾಗೂ ಯಾವುದೇ ಸರ್ಕಾರಿ ನೌಕರರಾಗಿರಬಾರದು. (ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು, ಅರೆ ಸರ್ಕಾರಿ ಸಂಸ್ಥೆಗಳು).
2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ-ಸAಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದ, ವಾದ್ಯ ಪರಿಕರ, ವೇಷಭೂಷಣ, ಖರೀದಿ, ಶಿಲ್ಪಕಲೆ, ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಪಡೆದವರು ಈ ಯೋಜನೆಯಡಿ ಅರ್ಜಿ ಸಲ್ಲಿಸುವಂತಿಲ್ಲ.
ಅರ್ಹ ಕಲಾವಿದರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ (ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟ ಲಗತ್ತಿಸಿ) ವಿವರನ್ನೊಳಗೊಂಡ ಅಜಿಯನ್ನು ಜಿಲ್ಲೆಯ ನಾಗರಿಕ ಸೇವಾ ಕೇಂದ್ರಗಳಲ್ಲಿ ಅಥವಾ ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿ ಸೇವಾಸಿಂಧು ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2021ರ ಜೂನ್ 5 ಕೊನೆಯ ದಿನವಾಗಿದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ 9901333106 ಹಾಗೂ ಕಚೇರಿ ಸಿಬ್ಬಂದಿಗಳ ಮೊಬೈಲ್ ಸಂಖ್ಯೆ 7892956564, 7975111587 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.