News

UPSC, KPSC ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

18 September, 2021 4:33 PM IST By:

ಕರ್ನಾಟಕ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಯುಪಿಎಸ್‌ಸಿ, ಕೆಎಎಸ್, ಗ್ರೂಪ್‌-ಸಿ, ಬ್ಯಾಂಕಿಂಗ್, ಎಸ್‌ಎಸ್‌ಸಿ ಮತ್ತು ಅರ್‌ಆರ್‌ಬಿ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅರ್ಹರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

 ತರಬೇತಿಯನ್ನು ಆನ್‌ಲೈನ್‌ / ಆಫ್‌ಲೈನ್‌ ಮೂಲಕ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಕೋರ್ಸ್‌ ಮತ್ತು ತರಬೇತಿ ಅವಧಿ ವಿವರ
ಯುಪಿಎಸ್‌ಸಿ - 5 ತಿಂಗಳು ಕೆಎಎಸ್ - 7 ತಿಂಗಳು, ಗ್ರೂಪ್-ಸಿ - 3 ತಿಂಗಳು, ಬ್ಯಾಂಕಿಂಗ್ - 3 ತಿಂಗಳು, ಆರ್‌ಆರ್‌ಬಿ - 3 ತಿಂಗಳು

ಶಿಷ್ಯವೇತನ: ಶಿಷ್ಯವೇತನ ಮಾಸಿಕವಾಗಿ ನೀಡಲಾಗುವುದು. ದೆಹಲಿಯಲ್ಲಿ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ, ಹೈದಾರಾಬಾದ್ ನಲ್ಲಿ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ 8 ಸಾವಿರ ರೂಪಾಯಿ ಕರ್ನಾಟಕದಲ್ಲಿ 6 ಸಾವಿರ ಹಾಗೂ ಚೆನೈನಲ್ಲಿ ಅಧ್ಯಯನ ಮಾಡುವ ಅಭ್ಯರ್ಥಿಗಳಇಗೆ 5 ಸಾವಿರ ರೂಪಾಯಿ ಮಾಸಿಕ ಶಿಷ್ಯವೇತನ ನೀಡಲಾಗುವುದು.
ವಯೋಮಿತಿ ಅರ್ಹತೆ : ಕನಿಷ್ಠ 18 ವರ್ಷ ಪೂರೈಸಿರಬೇಕು.

ಅರ್ಜಿ ಸಲ್ಲಿಸಲು ಇತರೆ ಅರ್ಹತೆಗಳು

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕರ್ನಾಟಕ ರಾಜ್ಯದ ಅನುಸೂಚಿತ ಜಾತಿ ಮತ್ತು ಅನುಸೂಚಿತ ವರ್ಗಕ್ಕೆ ಸೇರಿದ ಜಾತಿ ಪಟ್ಟಿಯಲ್ಲಿರುವ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.5 ಲಕ್ಷಗಳ ಒಳಗಿರಬೇಕು.  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ತರಬೇತಿಗೆ ಆಯ್ಕೆ ವಿಧಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 2020 ರ ಡಿಸೆಂಬರ್ ತಿಂಗಳಲ್ಲಿ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿಲ್ಲ.  ಆದರೆ ಕೆಇಎ ಯಿಂದ ನಡೆಸಲಾಗುವ ಪ್ರವೇಶ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆಯು ಅಕ್ಟೋಬರ್ ಅಥವಾ ನವೆಂಬರ್ 2021 ರ ತಿಂಗಳಲ್ಲಿ ಏರ್ಪಡಿಸಲಾಗುತ್ತದೆ. ಸಾಮಾನ್ಯ ಪ್ರವೇಶ ಪರೀಕ್ಷಾ ದಿನಾಂಕವನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಕಂವಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ sw.kar.nic.in ನ್ನು ಸಂಪರ್ಕಿಸಲು ಕೋಕರಲಾಗಿದೆ. ಅಭ್ಯರ್ಥಿಯು ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ವಯ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ : www.sw.kar.nic.in ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಬೇಕಾದಲ್ಲಿ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್‌ ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.