News

ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

14 December, 2020 8:32 AM IST By:

ಇಂದಿನ ಯುವಕರು ಉದ್ಯೋಗಕ್ಕಾಗಿ ಎಷ್ಟೇ ಪ್ರಯತ್ನಿಸಿದರು ಬೆರಳಣಿಕೆಯಷ್ಟು ಜನರಿಗೆ ಮಾತ್ರ ಉದ್ಯೋಗ ದೊರಕುತ್ತದೆ, ಹಾಗಾಗಿ ನಮ್ಮ ದೇಶದಲ್ಲಿ ನಿರುದ್ಯೋಗಿ ಸಮಸ್ಯೆ ತುಂಬಾ ಕಾಡುತ್ತಿದೆ ಇದನ್ನು ಹೋಗಲಾಡಿಸಲು ನಾವುನೀವೆಲ್ಲಾ ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ನೀಡುವಂತಾಗಬೇಕು,

 ಅದಕ್ಕಾಗಿ ಸರ್ಕಾರ ಅನೇಕ ಸಹಾಯಗಳನ್ನು ಮಾಡುತ್ತಿದ್ದು ಹಲವಾರು ತರಹದ ತರಬೇತಿಗಳನ್ನು ನೀಡುತ್ತಿದೆ, ಹಾಗಾಗಿ ನಾವು ಅದರ ಸದುಪಯೋಗವನ್ನು ಪಡೆದುಕೊಂಡು ಕೌಶಲ್ಯವನ್ನು ಪಡೆದುಕೊಂಡು ಒಂದು ಸ್ವಂತ ಉದ್ಯಮ ಸ್ಥಾಪಿಸುವ ಮೂಲಕ ಹಲವಾರು ಜನರಿಗೆ ಉದ್ಯೋಗ ನೀಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

 ಸರ್ಕಾರವಾದರೂ ಎಷ್ಟು ಜನರಿಗೆ ಉದ್ಯೋಗವನ್ನು ನೀಡಲು ಸಾಧ್ಯ ನೀವೇ ಹೇಳಿ, ಅದಕ್ಕಾಗಿ ಸರ್ಕಾರ ನಮಗೆ ಕೌಶಲ್ಯ ಬೆಳವಣಿಗಾಗಿ ತರಬೇತಿಯನ್ನು ನೀಡುತ್ತಿದೆ ಹಾಗಾಗಿ ನಾವೆಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ.

 ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಅಡಿಯಲ್ಲಿ ಯುವಕ-ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ.

 ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯಾಗಿ ಹುಬ್ಬಳ್ಳಿಯ ಗೋಕುಲ ರಸ್ತೆಯ ಕೈಗಾರಿಕಾ ವಸಾಹತು ಹಾಗೂ ಧಾರವಾಡದ ರಾಯಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿಯನ್ನು  ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ-0836233159, 9686522203.

 ಈ ತರಬೇತಿಯಲ್ಲಿ ಕೇವಲ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಹಾಗೂ ಹುಬ್ಬಳ್ಳಿ-ಧಾರವಾಡದ ಅವಳಿನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಜಿಟಿಟಿಸಿ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.