1. ಸುದ್ದಿಗಳು

ಹೈನುಗಾರಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ಕುರಿತು ತರಬೇತಿ ನೀಡಲಿದ್ದು, ಕಲಬುರಗಿ ಜಿಲ್ಲೆಯ ಯುವಕರು, ರೈತರಿಂದ ಅರ್ಜಿ ಆಹ್ವಾನಿಸಿದೆ.

ಅಕ್ಟೋಬರ್‌ 5 ರಿಂದ 14ರವರೆಗೆ 10 ದಿನ ನಡೆಯುವ ತರಬೇತಿಯಲ್ಲಿ ಉಚಿತ ಊಟ ಮತ್ತು ವಸತಿ ಒದಗಿಸಲಾಗುವುದು. ತರಬೇತಿ ಪಡೆಯಲು ಇಚ್ಛಿಸುವವರು 18 ರಿಂದ 45 ವಯೋಮಾನದಲ್ಲಿ ಇರಬೇಕು. ಬಿಪಿಎಲ್‌ ಕುಟುಂಬಕ್ಕೆ ಸೇರಿದ ಗ್ರಾಮೀಣ ಭಾಗದ ನಿರುದ್ಯೋಗಿಗಳು ಆಗಿರಬೇಕು.

ಆಸಕ್ತರು ಅಗತ್ಯ ದಾಖಲೆಪತ್ರಗಳೊಂದಿಗೆ ಅಕ್ಟೋಬರ್ 1ರಂದು ಬೆಳಿಗ್ಗೆ 11ಕ್ಕೆ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.  ಹೆಚ್ಚಿನ ಮಾಹಿತಿಗಾಗಿ ಮಾ: 9243602888 ಅಥವಾ 9886781239ಗೆ ಸಂಪರ್ಕಿಸಲು ಕೋರಲಾಗಿದೆ.

 

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.