ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ಬಯಸುವ ರೈತರಿಗೆ ಇಲ್ಲಿದೆ ಸಂತಸದ ಸುದ್ದಿ. ಹೌದು ಹೈನೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ತರಬೇತಿ ಆಯೋಜಿಸಲಾಗುತ್ತಿದೆ. ಡಿಸೆಂಬರ್ ಮತ್ತು ಮಾರ್ಚ್ ತಿಂಗಳ ಮಧ್ಯದಲ್ಲಿ ಮೂರು ದಿನಗಳ ಕಾಲ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಧಾರವಾಡ, ಗದಗ, ಹಾವೇರಿ ಮತ್ತು ಕಾರವಾರ ಜಿಲ್ಲೆಗಳ ರೈತ/ರೈತ ಮಹಿಳೆಯರಿಗೆ ಧಾರವಾಡ ಜಿಲ್ಲೆಯ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಇದೇ ಡಿಸೆಂಬರ್ 2020 ರಿಂದ 2021 ರ ಮಾರ್ಚ್ ತಿಂಗಳ ಮದ್ಯದಲ್ಲಿ ಧಾರವಾಡ ಜಿಲ್ಲೆಯ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ 3 ದಿನಗಳ ಕಾಲ ಉಚಿತ ಹೈನುಗಾರಿಕೆ ಹಾಗೂ ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿ ನೀಡಲಾಗುತ್ತದೆ.
ಆಸಕ್ತರು ತಮ್ಮ ಹೆಸರನ್ನು ಎಸ್.ಎಂ.ಎಸ್.ಸಂದೇಶದ ಮೂಲಕ ಅಥವಾ ಕಚೇರಿಯ ದೂರವಾಣಿಗೆ ಕರೆ ಮಾಡಿ ಅಥವಾ ಖುದ್ದು ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:.0836-2443743 ಹಾಗೂ ಮೊ.9591024499ನ್ನು ಸಂಪರ್ಕಿಸಲು ಕೋರಲಾಗಿದೆ.
Share your comments