News

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಕೃಷಿಕ್ ಸರ್ವೋದಯ ಫೌಂಡೇಷನ್ ವತಿಯಿಂದ ಅರ್ಜಿ ಆಹ್ವಾನ

27 November, 2020 9:13 AM IST By:

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉನ್ನತ ವಿಧ್ಯಾಭ್ಯಾಸ ಮುಂದುವರೆಸಲು ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಲು ಕೃಷಿಕ್ ಸರ್ವೋದಯ ಫೌಂಡೇಷನ್ ಮುಂದಾಗಿದೆ.

ಆರ್ಥಿಕ ಸಮಸ್ಯೆಯಿಂದಾಗಿ ಬಹಳಷ್ಟು ವಿದ್ಯಾರ್ಥಿಗಳು ತಮ್ಮ ವಿಧ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವುದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವಿದ್ಯಾರ್ಥಇ ವೇತನ ನೀಡುತ್ತಿದೆ. ಹೌದು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಕೃಷಿಕ್ ಸರ್ವೋದಯ ಫೌಂಡೇಷನ್ ಅರ್ಜಿ ಆಹ್ವಾನಿಸಿದೆ.

ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ವೃತ್ತಿಪರ ಶಿಕ್ಷಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ, ವಿದ್ಯಾಭ್ಯಾಸ ಮುಂದುವರಿಸಲು ಇಚ್ಛಿಸಿದ ಅಭ್ಯರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ವಿದ್ಯಾರ್ಥಿಯು ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿವರೆಗೆ ವ್ಯಾಸಂಗ ಮಾಡಿರಬೇಕು.

 ಅರ್ಜಿ ಪ್ರತಿಗಳು www.krishiksarvodayafoundation.org ನಲ್ಲಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಡಿ.5ರೊಳಗೆ ಕೃಷಿಕ್ ಸರ್ವೋದಯ ಫೌಂಡೇಷನ್, ನಂ.15, 2ನೇ ಹಂತ, ಗಾಲ್ಟ್ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು–560008 ಈ ವಿಳಾಸಕ್ಕೆ ಕಳುಹಿಸುವಂತೆ ಫೌಂಡೇಷನ್ ಕಾರ್ಯದರ್ಶಿ ಟಿ. ತಿಮ್ಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080 25202299 ಗೆ ಸಂಪರ್ಕಿಸಲು ಕೋರಲಾಗಿದೆ.