ಹಾಸನ ಜಿಲ್ಲೆಯ ಜವಳಿ ಉದ್ಯಮದಲ್ಲಿ ಕೆಲಸ ಮಾಡಲು ವಯೋಮಿತಿ 18 ರಿಂದ 27 ವರ್ಷದೊಳಗಿನ ಅವಿವಾಹಿತ ಮಹಿಳೆಯರು ಬೇಕಾಗಿದ್ದು, ಇದಕ್ಕಾಗಿ ಆಸಕ್ತಿಯುಳ್ಳ ಅರ್ಹ ಮಹಿಳೆಯರು ಅವಶ್ಯಕ ದಾಖಲಾತಿಗಳೊಂದಿಗೆ ಕಲಬುರಗಿ ಜಿಲ್ಲಾ ಉದೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಹಿಳೆಯರು ಕನಿಷ್ಠ 8ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿರಬೇಕು. ತಿಂಗಳಿಗೆ 8000 ರೂ.ಗಳ ವೇತನ ನೀಡಲಾಗುತ್ತದೆ. ವಸತಿ ಹಾಗೂ ಊಟ, ವೈದ್ಯಕೀಯ ವ್ಯವಸ್ಥೆ, ಪಿ.ಎಫ್., ಇಎಸ್ಐ ಹಾಗೂ ಕಂಪನಿಗೆ ಹೋಗಿ ಬರಲು ವಾಹನದ ವ್ಯವಸ್ಥೆ ಇರುತ್ತದೆ. ಉನ್ನತ ವ್ಯಾಸಂಗಕ್ಕಾಗಿ ಕಂಪನಿಯು ಸಹಕಾರ ನೀಡಲಿದೆ.
ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿ ಹಾಗೂ ಜಿರಾಕ್ಸ್ ಪ್ರತಿ, ಆಧಾರ ಕಾರ್ಡ್, ಬಿ.ಪಿ.ಎಲ್. ಕಾರ್ಡ್, ಇತ್ತೀಚಿನ ಭಾವಚಿತ್ರ ಹಾಗೂ (ರೆಸ್ಯೂಮ್) ಬಯೋಡಾಟಾದೊಂದಿಗೆ ಕಲಬುರಗಿ ಜಿಲ್ಲಾ ಉದೋಗ ವಿನಿಮಯ ಕಚೇರಿಗೆ ಬಂದು 2020ರ ನವೆಂಬರ್ 11 ರೊಳಗಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಎಂ.ಎಸ್.ಕೆ. ಮಿಲ್ ರಸ್ತೆಯ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದೋಗ ವಿನಿಮಯ ಕಚೇರಿಯನ್ನು ಅಥವಾ ಮೊಬೈಲ್ ಸಂಖ್ಯೆ 9591098811, 8904190925 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Share your comments