ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿ ಹಿಂಗಾರು ಹಂಗಾಮಿನಲ್ಲಿ ಜಾರಿಗೊಳಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ ಎಂದು ಬಾಗಲಕೋಟೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗಳಿಗೂ ಒಂದೇ ಅರ್ಜಿ ಸಲ್ಲಿಸಬೇಕು. ಅರ್ಜಿಯ ಜತೆಗೆ ರೈತರ ಭಾವಚಿತ್ರ, ಪಹಣೆ ಪತ್ರಿಕೆ, ಶುಲ್ಕ ಪಾವತಿಸಿದ್ದಕ್ಕೆ ಚಲನ್, ಪರಿಶಿಷ್ಟ ಜಾತಿ, ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಕೃಷಿ ಪ್ರಶಸ್ತಿಗೆ ಬಾದಾಮಿ, ಬಾಗಲಕೋಟೆ, ಬೀಳಗಿ, ಜಮಖಂಡಿ, ಮುಧೋಳ ತಾಲ್ಲೂಕಿಗೆ ಹಿಂಗಾರು ಜೋಳ (ಮಳೆ ಆಶ್ರಿತ), ಹುನಗುಂದ ತಾಲೂಕಿಗೆ ಕಡಲೆ (ಮಳೆ ಆಶ್ರಿತ) ಬೆಳೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಕೊಳ್ಳಬಹುದು.
ಕೃಷಿ ಪ್ರಶಸ್ತಿ: ಅರ್ಜಿ ಆಹ್ವಾನ
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿ ನೀಡಲು ಯಾದಗಿರಿ ಜಿಲ್ಲಾ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳೆ ಸ್ಪರ್ಧೆ ಇಳುವರಿ ಆಧಾರದ ಮೇಲೆ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟಕ್ಕೆ ವಿವಿಧ ಬೆಳೆಗಳಿಗೆ ಪ್ರಶಸ್ತಿ ನೀಡಲಾಗುವುದು.
ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಗದು ಬಹುಮಾನದ ಜೊತೆಗೆ ವಿಜೇತರಿಗೆ ಪ್ರಶಸ್ತಿ ಫಲಕ ಗಳನ್ನು ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಪ್ರತಿ ಬೆಳೆಗೂ ಪ್ರವೇಶ ಶುಲ್ಕ 25, ಸಾಮಾನ್ಯ ವರ್ಗದ ರೈತರು ಪ್ರವೇಶ ಶುಲ್ಕ 100 ಪಾವತಿಸಿ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು.