1. ಸುದ್ದಿಗಳು

ಕೃಷಿಕ ಪ್ರಶಸ್ತಿ ನೋಂದಣಿಗೆ ಸೆ. 15 ಕಡೆಯ ದಿನ

ರಾಜ್ಯದಲ್ಲಿ ಉತ್ತಮ ಕೃಷಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಡಮಾಡುವ ಉತ್ತಮ ಕೃಷಿಕ ಪ್ರಶಸ್ತಿಗೆ ಹೆಸರು ನೋಂದಾಯಿಸಲು ಸೆ. 15 ಕಡೆಯ ದಿನವಾಗಿದೆ.

 ಈ ಯೋಜನೆಯಡಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಮೂರು ಬಹುಮಾನ ನೀಡಲಾಗುವುದು. ಹೆಚ್ಚು ಇಳುವರಿ ಪಡೆದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಅರ್ಜಿದಾರ ಕ್ರಿಯಾಶೀಲ ಕೃಷಿಕನಾಗಿರಬೇಕು. ಅರ್ಜಿ ಯೊಂದಿಗೆ ಪಹಣಿ ಪತ್ರಿಕೆ, ಶುಲ್ಕ ಪಾವತಿಸಿದ್ದಕ್ಕೆ ಚಲನ್‌, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತ ರಾದಲ್ಲಿ ಜಾತಿ ಪ್ರಮಾಣಪತ್ರ ನೀಡಬೇಕು.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸುತ್ತಿರುವವರು ಬೆಳೆ ಪದ್ಧತಿ, ಸಮಗ್ರ ಕೃಷಿ ಪದ್ಧತಿ ಬೆಳೆ ಪದ್ಧತಿಗಳು ಮತ್ತು ಬೆಳೆ ವೈವಿಧ್ಯ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರ ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಕುರಿತ ವಿಭಾಗಗಳಲ್ಲಿ ಅರ್ಜಿಗಳನ್ನು ಸಂಬಂಧಿತ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು.

Published On: 12 September 2020, 06:46 PM English Summary: Application invited for krishi pandit award (1)

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.