ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2021-22ನೇ ಸಾಲಿನ ಉದ್ಯೋಗಿನಿ, ಕಿರುಸಾಲ, ಸಮೃದ್ಧಿ, ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ 23 ರೊಳಗೆ ಅರ್ಜಿಗಳನ್ನು ಪಡೆದು ದಾಖಲೆಗಳೊಂದಿಗೆ ದ್ವಿಪ್ರತಿಗಳಲ್ಲಿ ಸೆಪ್ಟೆಂಬರ್ 13 ರೊಳಗೆ ಸದರಿ ಕಚೇರಿಗೆ ಸಲ್ಲಿಸಬಹುದು.
ಉದ್ಯೋಗಿನಿ, ಕಿರುಸಾಲ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ. ಸಮೃದ್ಧಿ, ಚೇತನಾ, ಧನಶ್ರೀ, ಮತ್ತು ಲಿಂಗತ್ಪ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08156 277111, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೂತನ ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಕಚೇರಿಗೆ ಸಂಪರ್ಕಿಸಬಹುದು.
ತೋಟಗಾರಿಕೆ ಇಲಾಖೆಯಿಂದ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಸೌಲಭ್ಯಗಳಿವೆ ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ ರಾಜು ತಿಳಿಸಿದ್ದಾರೆ. ಯಾಂತ್ರೀಕರಣ ಟ್ರ್ಯಾಕ್ಟರ್ 20 ಎಚ್ಪಿ ಸಾಮಾನ್ಯ ವರ್ಗಕ್ಕೆ ಶೇ. 25 ರಷ್ಟು ಸಹಾಯಧನ 75 ಸಾವಿರ ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾಗತಿಗೆ ಶೇ, 35 ರಷ್ಟು ಸಹಾಯಧನ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಪವರ್ ಟಿಲ್ಲರ್ ಗೆ ಸಾಮನ್ಯ ಶೇ. 50 ರ,ಟು ಸಹಾಯಧನ, 40 ಗರಿಷ್ಟ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಶೇ. 50 ಸಾವಿರ ರೂಪಾಯಿ ಗರಿಷ್ಠ ಮಿತಿ ಸಹಾಯಧನ ನೀಡಲಾಗುವುದು ಎಂದು ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಉಚಿತ ಹೈನುಗಾರಿಕೆ ತರಬೇತಿ'ಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕಿನ ಸಹಭಾಗಿತ್ವದಲ್ಲಿ ಬಾಗಲಕೋಟೆ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ಕುಟುಂಬದ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಮತ್ತು ಊಟ ವಸತಿಯೊಂದಿಗೆ ಉಚಿತವಾಗಿದ್ದು ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದ ಮೊದಲ ಆದ್ಯತೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಕೇಂದ್ರ ಹಳಿಯಾಳ, ಉತ್ತರ ಕನ್ನಡ ಜಿಲ್ಲೆಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 9483485489, 9482188780, 08284-295307ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಪ್ರಸನ್ನ ಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.