ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಡಿ ಸಾಲಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶ್ರಮಶಕ್ತಿ ಸಾಲದ ಯೋಜನೆ, ಕಿರು (ಮೈಕ್ರೋ) ಸಾಲದ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಪಶು ಸಂಗೋಪನಾ ಯೋಜನೆ (ಗ್ರಾಮೀಣ ಮಹಿಳೆಯರಿಗೆ ಮಾತ್ರ), ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಸಲು ಸಹಾಯಧನ ಯೋಜನೆ, ಆಟೋಮೊಬೈಲ್ಸ್ ಸರ್ವೀಸ್ ತರಬೇತಿ ಹಾಗೂ ಸಾಲ ಸೌಲಭ್ಯ ಯೋಜನೆ, ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆ, ಸಣ್ಣ ಮತ್ತು ಅತೀ ಸಣ್ಣ ರೈತರಿಗಾಗಿ ಕೃಷಿ ಯಂತ್ರೋಪಕರಣ ಖರೀದಿಸಲು ಸಾಲ ಸೌಲಭ್ಯ ಹಾಗೂ ಗೃಹ ನಿರ್ಮಾಣ ಮಾರ್ಜಿನ ಹಣ ಸಾಲ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ನಗರ ಪ್ರದೇಶದವರಿಗೆ 1.03 ಲಕ್ಷ ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದವರಿಗೆ 81,000 ರೂಪಾಯಿ ದೊಳಗಿರಬೇಕು.
ಅರ್ಹ ಅಭ್ಯರ್ಥಿಗಳು ನಿಗಮದ www.kmdc.kar.nic.in/loan/login.aspx ವೆಬ್‍ಸೈಟ್‍ನ ಲಿಂಕ್ ಮೂಲಕ ಆನ್‍ಲೈನ್‍ದಲ್ಲಿ 2020ರ ಡಿಸೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್‍ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ಕಲಬುರಗಿ ಜಿಲ್ಲಾ ನಿಗಮದ ಕಚೇರಿಯಲ್ಲಿ 2020ರ ಡಿಸೆಂಬರ್ 21 ರೊಳಗಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುದಿಲ್ಲ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು (ರಜಾದಿನವನ್ನು ಹೊರತುಪಡಿಸಿ) ಹಾಗೂ ನಿಗಮದ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.
Share your comments