ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಜಾರಿಗೊಳಿಸಿರುವ ಲಾಕ್‍ಡೌನ್ ಪರಿಣಾಮದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ಸರ್ಕಾರವು 2,000 ರೂ.ಗಳ ಆರ್ಥಿಕ ನೆರವನ್ನು ನೀಡುತ್ತಿದೆ. ಇದಕ್ಕಾರ್ಗಿ ಕಲಬುರಗಿ ಜಿಲ್ಲಾ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೈಮಗ್ಗ ನೇಕಾರರು ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರಬೇಕು. 4ನೇ ರಾಷ್ಟ್ರೀಯ ಕೈಮಗ್ಗ ಗಣತಿಯಲ್ಲಿ ನೊಂದಾಯಿಸಿರಬೇಕು. ನೇಕಾರರಿಗೆ 2,000 ರೂ.ಗಳ ಅರ್ಥಿಕ ನೆರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿರುವುದರಿಂದ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ವಿವರವನ್ನು ಕಡ್ಡಾಯವಾಗಿ ಒದಗಿಸಬೇಕು.
ಅರ್ಹ ಕೈಮಗ್ಗ ನೇಕಾರರು ಈ ಕೆಳಕಂಡ ಕೈಮಗ್ಗ ನೇಕಾರರ ಸಹಕಾರ ಸಂಘದಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಫಲಾನುಭವಿಯ ಆಧಾರ್ ಕಾರ್ಡನ ಪ್ರತಿ, ರೇಷನ್ ಕಾರ್ಡ್ ಪ್ರತಿ, ಆಧಾರ ಲಿಂಕ್ ಮಾಡಿರುವ ವೈಯಕ್ತಿಕ ನೇಕಾರರ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಾಸ್‍ಪೋರ್ಟ ಸೈಜ್ ಅಳತೆಯ ಪೋಟೋ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಯಾ ಸಂಘಗಳ ಕಾರ್ಯದರ್ಶಿಗಳಿಗೆ ಅರ್ಜಿ 2020ರ ಜೂನ್ 26 ರೊಳಗಾಗಿ ಸಲ್ಲಿಸಬೇಕು. ನಂತರ ದಾಖಲಾತಿಗಳನ್ನು ಪರಿಶೀಲಿಸಿ ಸೇವಾ ಸಿಂಧು ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅಳವಡಿಸಲಾಗುತ್ತದೆ.
ಕೈಮಗ್ಗ ನೇಕಾರರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಠಡಿ ಸಂಖ್ಯೆ 15, 2 ನೇ ಮಹಡಿ, ಮಿನಿ ವಿಧಾನ ಸೌಧ, ಕಲಬುರಗಿ-585102 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278629, ಮೊಬೈಲ್ ಸಂಖ್ಯೆ 9008941033/ 9900391684 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.