News

ಮೆಟ್ರಿಕ್ ನಂತರದ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

21 January, 2021 6:06 AM IST By:

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಯು.ಆರ್.ಎಲ್. ತಂತ್ರಾಂಶದ http://ssp.postmatric.karanataka.gov.in ಮೂಲಕ ಅರ್ಜಿ  ಆಹ್ವಾನಿಸಲಾಗಿದೆ.

ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ   ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. 10ನೇ ತರಗತಿ ನಂತರದ ಕೋರ್ಸ್‍ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು. ತಮ್ಮ ಆಧಾರ ಸಂಖ್ಯೆಯನ್ನು (ಎನ್.ಪಿ.ಸಿ.ಐ.-ನ್ಯಾಷನಲ್ ಪೇಮೆಂಟ್ ಕಾರ್ಪೋರೇಶನ್ ಆಫ್ ಇಂಡಿಯಾ (NPCI-National Payment Corporation of India) ದಲ್ಲಿ ಕಡ್ಡಾಯವಾಗಿ ಲಿಂಕ್ ಮಾಡಿಕೊಳ್ಳಬೇಕು. ಲಿಂಕ್ ಮಾಡಲು ತಮ್ಮ ಖಾತೆಗೆ ಸಂಬಂಧಪಟ್ಟ ಬ್ಯಾಂಕಿಗೆ ಸಂಪರ್ಕಿಸಬೇಕು. 

ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಪೋರ್ಟಲ್‍ನಲ್ಲಿ ಆಧಾರ ವಿವರ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಎಸ್.ಎಸ್.ಪಿ. ಖಾತೆಯನ್ನು ಸೃಜಿಸಿಕೊಳ್ಳಬೇಕು.  ಈ ಮೆಟ್ರಿಕ್ ನಂತರ ವೇತನಕ್ಕಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಸಂಬಂಧಪಟ್ಟ ವಿಶ್ವವಿದ್ಯಾಲಯದ  ಮುಖ್ಯಸ್ಥರಿಗೆ ಮತ್ತು ಕಾಲೇಜಿನ ಪ್ರಾಚಾರ್ಯರಿಗೆ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಎಸ್.ಎಸ್.ಪಿ. ಪೋರ್ಟಲ್ ಸಹಾಯವಾಣಿಯನ್ನು ಹಾಗೂ ಕಲಬುರಗಿಯ ಮಿನಿ ವಿಧಾನ ಸೌಧದ ಎದುರುಗಡೆಯಿರುವ ಐವಾನ್ ಶಾಹಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.