News

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

31 January, 2021 9:40 AM IST By: KJ Staff
cash

ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಕಲಬುರಗಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಯು.ಆರ್.ಎಲ್. www.ssp.karnataka.gov.inವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.  ವಿದ್ಯಾರ್ಥಿಗಳು ಎಸ್.ಎ.ಟಿ.ಎಸ್. (SATS) ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ,  ಹಿಂದಿನ ತರಗತಿಯ ಅಂಕಪಟ್ಟಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ (ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಎನ್.ಪಿ.ಸಿ.ಐ.(NPCI)  ಲಿಂಕ್ ಮಾಡುವುದು ಕಡ್ಡಾಯ ಇರುತ್ತದೆ).  ಪಡೀತರ ಚೀಟಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಜೊತೆಗೆ ಎಲ್ಲಾ ದಾಖಲಾತಿಗಳ ದೃಢೀಕರಣ ಪ್ರತಿಯನ್ನು ತಮ್ಮ ಶಾಲೆಯ ಮುಖ್ಯ ಗುರುಗಳಿಗೆ ಸಲ್ಲಿಸಿ ಅದರ ಒಂದು ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.