ರಾಜ್ಯದ ಗದಗ, ಹಾಸನ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಅಂಗನವಾಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.
ಹಾಸನ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳು
1) ಅಂಗನವಾಡಿ ಕಾರ್ಯಕರ್ತೆ: 21
2) ಅಂಗನವಾಡಿ ಸಹಾಯಕಿ: 80
ಹಾಸನ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ.
ದಕ್ಷಿಣ ಕನ್ನಡ
1) ಅಂಗನವಾಡಿ ಕಾರ್ಯಕರ್ತೆ: 15
2) ಅಂಗನವಾಡಿ ಸಹಾಯಕಿ: 45
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 06/02/2021 ಕೊನೆಯ ದಿನವಾಗಿರುತ್ತದೆ.
ಗದಗ
1) ಅಂಗನವಾಡಿ ಕಾರ್ಯಕರ್ತೆ: 20
2) ಅಂಗನವಾಡಿ ಸಹಾಯಕಿ: 103
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 08/02/2021 ಕೊನೆಯ ದಿನವಾಗಿರುತ್ತದೆ.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :
ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್ ), ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ , ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ, ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಈ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವೆಬ್‌ಸೈಟ್: https://anganwadirecruit.kar.nic.in ಅರ್ಜಿ ಸಲ್ಲಿಸಬಹುದು.