ಧಾರವಾಡ : 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸೈನಿಕ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ಪಿಯುಸಿ 2ನೇ ವರ್ಷದವರೆಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಪದವಿ, ಡಿಪ್ಲೋಮಾ ಜೆಓಸಿ, ಪ್ರೋಫೇಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಮಿಲಿಟರಿ ಪಿಂಚಣಿ ರಹಿತ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಇವರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 30, 2023 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಕಾರ್ಯಾಲಯದಲ್ಲಿ ಸಲ್ಲಿಸಬೇಕೆಂದು ಉಪನಿರ್ದೇಶಕ ಎಂ.ಎಸ್. ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತ್ಮ ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಅರ್ಜಿ ಆಹ್ವಾನ
ಧಾರವಾಡ : 2023-24 ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಅಧೀನ ಕಚೇರಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನಗಳಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದ ಮತ್ತು ಕನಿಷ್ಠ 1 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ಆಯ್ಕೆಯು ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಮೂಲಕ ಮಾಡಲಾಗುವುದು.
ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ, ಕಂಪ್ಯೂಟರ್ ಜ್ಞಾನ ಹೊಂದಿದ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಪ್ರತಿ ಇತ್ಯಾದಿ ದೃಢೀಕೃತ ದಾಖಲಾತಿಗಳನ್ನು ಆಗಸ್ಟ್ 10 ರ ಸಾಯಂಕಾಲ 4-30 ಘಂಟೆಯೊಳಗಾಗಿ ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದೆಂದು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಬೇಳೆ ಬೆಳೆಯುವ ರೈತರಿಗೆ ಸಾಲ, ಸಹಾಯಧನ ನೀಡಲು ಅರ್ಜಿ ಆಹ್ವಾನ
ಧಾರವಾಡ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹಣ್ಣು (ಬಾಳೆ), ಹೂ (ಗುಲಾಬಿ, ಬಿಡಿ ಸೇವಂತಿಗೆ, ಸುಗಂಧರಾಜ, ಚೆಂಡು ಹೂ), ಹೈಬ್ರಿಡ್ ತರಕಾರಿಗಳ ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕಗಳು, ಪ್ಲಾಸ್ಟಿಕ್ ಮಲ್ಚಿಂಗ್, ಕೊಯ್ಲೋತ್ತರ ನಿರ್ವಹಣೆ ಅಡಿ ಪ್ಯಾಕ್‍ಹೌಸ್, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕಗಳಿಗೆ ರೈತರಿಗೆ ಸಹಾಯಧನ ಸೌಲಭ್ಯಗಳಿಗೆ ಅರ್ಜಿ ಅಹ್ವಾನಿಸಿದೆ.
ಅರ್ಜಿಗಳನ್ನು ಆಗಸ್ಟ್ 12 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ, ಸಹಾಯಕ ತೋಟಗಾರಿಕೆ ಅಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ:0836-2744376, ಮಹೇಶ ಪಟ್ಟಣಶೆಟ್ಟಿ, ಅಮ್ಮಿನಬಾವಿ-9916114535, ದೀಪ್ತಿ ವಾಲಿ, ಗರಗ–8296482663, ವಾಯ್.ಎ. ಕುರುಬೆಟ್ಟ, ಅಳ್ನಾವರ-753674533, ವೀಣಾ ರಾಠೋಡ, ಧಾರವಾಡ-9480194517 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶಿವಯೋಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.