2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಜಿಲ್ಲೆಯ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: 18 ರಿಂದ 55 ವರ್ಷದ ಮಹಿಳೆಯರಿಗೆ ಅವಕಾಶವಿರುತ್ತದೆ. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಿರಬಾರದು.
ದಾಖಲಾತಿಗಳು: ನಿಗದಿತ ಅರ್ಜಿ ನಮೂನೆ (ತ್ರಿಪ್ರತಿ), ಜಾತಿ ಪ್ರಮಾಣ ಪತ್ರ ಮತ್ತು ಕುಟುಂಬದ ಇತ್ತೀಚಿನ ವಾರ್ಷಿಕ ಆದಾಯ ಪ್ರಮಾಣ ಪತ್ರ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ, ಕೈಗೊಳ್ಳುವ ಚಟುವಟಿಕೆಯ ಯೋಜನಾ ವರದಿ, ತರಬೇತಿ ಅಥವಾ ಅನುಭವದ ಪತ್ರ ಹಾಗೂ ಮತದಾನದ ಗುರುತಿನ ಚೀಟಿ ಲಗತ್ತಿಸಬೇಕು. ವಿಧವೆಯರು ಪತಿಯ ಮರಣ ದೃಡೀಕರಣ ಪ್ರತಿ, ವಿಕಲಚೇತನರಾದಲ್ಲಿ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. 1 ಲಕ್ಷದಿಂದ 3 ಲಕ್ಷಗಳ ವರೆಗೆ ನಿಗಧಿಪಡಿಸಲಾಗಿದ್ದು, ಸಾಲದ ಮೊತ್ತಕ್ಕೆ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ.
ಅರ್ಜಿಗಳನ್ನು ಬಾಗಲಕೋಟೆ ಜಿಲ್ಲೆಯ ಆಯಾ ತಾಲೂಕಿನ ಶಿಶು ಅಭಿವೈದ್ದಿ ಯೋಜನಾಧಿಕಾರಿಗಳ ಕಚೇಯಿಂದ ಪಡೆದು ನವೆಂಬರ 17 ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೈದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗದಿತ ದಾಖಲಾತಿಗಳೊಂದಿಗೆ ಪಡೆದ ಅರ್ಜಿಯನ್ನು ಪ್ರಾಥಮಿಕ ಪರಿಶೀಲನೆ ಮಾಡಲಾಗುವುದು. ಅರ್ಹ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ, ಆಯ್ಕೆಯಾದ ಅರ್ಜಿಗಳನ್ನು ಅರ್ಜಿದಾರರ ಸೇವಾ ವಲಯದಲ್ಲಿ ಬರುವ ಬ್ಯಾಂಕಿನ ಶಾಖೆಗಳಿಗೆ ಸಾಲ ಮಂಜೂರಾತಿಗಾಗಿ ಶಿಫಾರಸ್ಸು ಮಾಡಲಾಗುವುದು. ಬ್ಯಾಂಕಿನಿಂದ ಸಾಲ ನೀಡಲು ಒಪ್ಪಿದಲ್ಲಿ ಇಡಿಪಿ ತರಬೇತಿ ಏರ್ಪಡಿಸಿ ಸಹಾಯಧನ ಬಿಡುಗಡೆ ಮಾಡಲಾಗುವುದು.
Share your comments