ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅಲೆಮಾರಿ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗೆ 2020-21ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಈಗಾಗಲೇ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಸಲ್ಲಿಸದೆ ಇರುವವರು ನವೆಂಬರ್ 12 ರವರೆಗೆ ಅವಧಿ ವಿಸ್ತರಿಸಿದ್ದರಿಂದ ಅರ್ಜಿ ಸಲ್ಲಿಸಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀದಿ ಯೋಜನೆ ಹಾಗೂ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು:
ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿರಬೇಕು ಹಾಗೂ ಗ್ರಾಮೀಣ ಪ್ರದೇಶದವರಿಗೆ ವಾರ್ಷಿಕ ಆದಾಯ ರೂ.98,000 ಮತ್ತು ನಗರ ಪ್ರದೇಶದವರ ಆದಾಯ ರೂ.1.20 ಲಕ್ಷ ದೊಳಗಿರಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್, ವೋಟರ್ ಗುರುತಿನ ಚೀಟಿ, ಪಾನ್ ಕಾರ್ಡ್‌ಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ ಪಡೆದು ದಿನಾಂಕ 12-11-2020 ರೊಳಗೆ. ಅಥವಾ ನಿಗಮದ ವೆಬ್‌ಸೈಟ್ www.dbcdc.karnataka.gov.in ಮೂಲಕ ಆನ್‌ಲೈನ್ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಕಛೇರಿಗೆ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://dbcdc.karnataka.gov.in ಗೆ ಸಂಪರ್ಕಿಸಬಹುದು.