ಜಿ.ಆರ್.ಜಿ.ಎಫ್. (BRGF) ಮಹಿಳಾ ಸಬಲೀಕರಣದಡಿ ಕಲಬುರಗಿ ಮಹಾನಗರ ಪಾಲಿಕೆಯಿಂದ ಹೊಲಿಗೆ ಯಂತ್ರಗಳ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಫಲಾನುಭವಿಗಳು ಮಹಾನಗರ ಪಾಲಿಕೆಯ ವ್ಯಾಪ್ತಿಯ ನಿವಾಸಿಯಾಗಿರಬೇಕಲ್ಲದೇ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು. ಡೇ-ನಲ್ಮ್ ಯೋಜನೆ ಅಥವಾ ಸರ್ಕಾರದ ಇತರೆ ಇಲಾಖೆಯಿಂದ ತರಬೇತಿ ಪಡೆದ ಪ್ರಮಾಣಪತ್ರ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಹಾಗೂ ಇತರೆ ಜಾತಿಯ ಬಡವರಿಗೆ ಸರ್ಕಾರದ ನಿಗದಿಪಡಿಸಿದ ಗುರಿಗೆ ಅನ್ವಯ ಮೀಸಲಾತಿ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಕಲಬುರಗಿ ಮಹಾನಗರಪಾಲಿಕೆಯ ಆವಕ ಶಾಖೆಯಿಂದ ಉಚಿತವಾಗಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ್, ಚುನಾವಣೆ ಗುರುತಿನ ಚೀಟಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಲಗತ್ತಿಸಿ 2020ರ ಡಿಸೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.