News

ಕುರಿ-ಮೇಕೆ ಸಾಕಾಣಿಕೆಗಾಗಿ ಸಾಲ ಸೌಲಭ್ಯ ಹಾಗೂ ಉಚಿತ ಟೆಂಟ್ಗಾಮಗಿ ಅರ್ಜಿ ಆಹ್ವಾನ

14 October, 2020 6:30 AM IST By:

ಪ್ರಸಕ್ತ 2020-21ನೇ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆಗಾಗಿ ಸಾಲ ಸೌಲಭ್ಯ ಹಾಗೂ ಸಾಮಾನ್ಯ ಯೋಜನೆಯಡಿ ವಲಸೆ ಕುರಿಗಾರರಿಗೆ ಉಚಿತ ಟೆಂಟ್ ಹಾಗೂ ಇನ್ನಿತರ ಪರಿಕರಗಳ ಕಿಟ್‍ಗಳ ವಿತರಣಾ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕಲಬುರಗಿ ಉಪನಿರ್ದೇಶಕರು ತಿಳಿಸಿದ್ದಾರೆ.

     ಬೆಂಗಳೂರಿನ ಹೆಬ್ಬಾಳದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ(ನಿ)ದಲ್ಲಿ ನೋಂದಣಿಯಾಗಿರುವ ಕಲಬುರಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ 11 ಫಲಾನುಭವಿಗಳಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ 5 ಫಲಾನುಭವಿಗಳಿಗೆ ಕುರಿ/ಮೇಕೆ ಸಾಕಾಣಿಕೆ ಸಾಲ ಸೌಲಭ್ಯಕ್ಕಾಗಿ ಆಯ್ಕೆ ಮಾಡಲಾಗುತ್ತದೆ. 

        ಸಾಮಾನ್ಯ ಯೋಜನೆಯಡಿ ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ನಿಗಮದಲ್ಲಿ ನೋಂದಾಯಿತ ಸಂಘಗಳಲ್ಲಿ ಸದಸ್ಯರಾಗಿರುವ ವಲಸೆ ಕುರಿಗಾರರಿಗೆ ಉಚಿತ ಸಂಚಾರಿ ಟೆಂಟ್ ಹಾಗೂ ಇನ್ನಿತರ ಪರಿಕರಗಳ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಇದಕ್ಕಾಗಿ ಸಾಮಾನ್ಯ ವರ್ಗದ-7, ಪರಿಶಿಷ್ಟ ಜಾತಿ-2 ಹಾಗೂ ಪರಿಶಿಷ್ಟ ಪಂಗಡದ-1 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.

      ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ (ರಜಾ ದಿನ ಹೊರತುಪಡಿಸಿ) ಅಕ್ಟೋಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-237772 ಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ: ಆಡು ಸಾಕಾಣಿಕೆ ಮಾಡಿದರೆ ಕೈಯಲ್ಲಿ ಡೆಬಿಟ್ ಕಾರ್ಡ್ ಇದ್ದಂತೆ