News

ರೇಷ್ಮೆ ಬೆಳೆಗಾರರಿಂದ ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

29 September, 2020 9:41 AM IST By:

ರೇಷ್ಮೆ ಇಲಾಖೆಯಿಂದ 2019-20ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗೆ ಉತ್ತಮ ಪ್ರಗತಿ ಸಾಧಿಸಿರುವ ಹಾವೇರಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ಅರ್ಹ ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.

ಅರ್ಹ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅ.8ರೊಳಗೆ  ಸಲ್ಲಿಸಬೇಕು ಎಂದು ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.