ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಪರಿಶಿಷ್ಟ ಜಾತಿಯ ಉಪಯೋಜನೆ ವಿಶೇಷ ಕೇಂದ್ರಯ ನೆರವಿನಡಿ ಕಿಯೋನಿಕ್ಷ್(ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ) ಸಂಸ್ಥೆಯ ಸಹಯೋಗದಲ್ಲಿ ಹಾವೇರಿ ಜಿಲ್ಲೆಯ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಕೌಶಲಾಭಿವೃದ್ಧಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ 110 ಅಭ್ಯರ್ಥಿಗಳಿಗೆ, ಸೈಬರ್ ಸೆಕ್ಯೂರಿಟಿಯಲ್ಲಿ ೧೦೦ ಅಭ್ಯರ್ಥಿಗಳಿಗೆ ಆ್ಯಂಡ್ರೆಡ್ ಟ್ರೆನಿಂಗ್(ಸ್ಮಾರ್ಟ ಫೋನ್)ಗೆ 250 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಪರಿಶಿಷ್ಟ ಜಾತಿಯ ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾದ 18 ರಿಂದ 30 ರ ವರೆಗಿನ ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.
ತರಬೇತಿ ಸಮಯದಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಶೇ.75 ರಷ್ಟು ಹಾಜರಾತಿ ಇರಬೇಕು. ತರಬೇತಿಯನ್ನು ಮೊಟಕುಗೊಳಿಸುವಂತಿಲ್ಲ. ಅಭ್ಯರ್ಥಿಗಳಿಗೆ ತರಬೇತಿ ಮುಗಿದ ನಂತರ ಪ್ರಮಾಣ ಪತ್ರವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಪಡೆದು ಜಾತಿ, ಆದಾಯ, ಆಧಾರ, ಅಂಕಪಟ್ಟಿ, ರೇಷನ್ ಕಾರ್ಡ್ ಇತರೆ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮೇ ೧೧ರೊಳಗಾಗಿ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08375-249012 ಗೆ ಸಂಪರ್ಕಿಸಬಹುದು ಎಂದು ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಏಪ್ರೀಲ್ 30ರವರೆಗೆ ಅವಧಿ ವಿಸ್ತರಣೆ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಏ.30 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ ಜಮಖಾನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.