1. ಸುದ್ದಿಗಳು

ಬಿ.ಎಡ್. ಹಾಗೂ ಡಿ.ಎಡ್. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25000 ರೂಪಾಯಿ ವಿಶೇಷ ಪ್ರೋತ್ಸಾಹಧನ

ಬಿ.ಎಡ್.  ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25000 ರೂ.ಗಳ ವಿಶೇಷ ಪ್ರೋತ್ಸಾಹಧನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿದೆ. ಇದಕ್ಕಾಗಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಜೈನ್ ಹಾಗೂ ಫಾರ್ಸಿ ಜನಾಂಗಕ್ಕೆ  ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿ ಆಹ್ವಾನಿಸಬಹುದು.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್/ ಡಿಪಾಟ್‍ಮೆಂಟ್ ಆಫ್ ಸ್ಟೇಟ್ ಎಜ್ಯುಕೇಶನಲ್ ರಿಸರ್ಚ್ ಆ್ಯಂಡ್ ಟ್ರೇನಿಂಗ್‍ದಿಂದ ಮಾನ್ಯತೆ ಪಡೆದ ಸರ್ಕಾರಿ, ಅರೆ ಸರಕಾರಿ, ಅನುದಾನಿತ ಹಾಗೂ  ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್. ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಖುದ್ದಾಗಿ 2020ರ ಡಿಸೆಂಬರ್ 21ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

 ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಕಚೇರಿಗಳು ಹಾಗೂ ಇಲಾಖೆಯ https://dom.karnataka.gov.in ವೆಬ್‍ಸೆಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Published On: 07 December 2020, 09:27 AM English Summary: Application invited for special incentives

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.