News

30 ದಿನಗಳ ಉಚಿತ ಮಹಿಳಾ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

24 September, 2020 8:29 AM IST By:

ಕೊಪ್ಪಳ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಆಸಕ್ತ ಮಹಿಳೆಯರಿಗೆ 30 ದಿನಗಳ ಉಚಿತ ಮಹಿಳಾ ಹೊಲಿಗೆ ತರಬೇತಿಯನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು.  ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.  ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು,  ಅನುಭವ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು.  ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆಯ ದಿನಾಂಕ ಸೆ. 29 ಆಗಿದ್ದು, ಸೆ. 30 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು.  ಅಕ್ಟೋಬರ್. 01 ರಿಂದ ತರಬೇತಿಗಳು ಪ್ರಾರಂಭ ಆಗಲಿದ್ದು, ಆಯ್ಕೆಯಾದ ಮಹಿಳೆಯರಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. 

 ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂರವಾಣಿ ಸಂಖ್ಯೆ 08539-231038, ಮೊ.ಸಂ. 9448960002 ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಹೊಲಿಗೆ ತರಬೇತಿ ಪಡೆಯಲು ತಾಲೂಕಿನ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಸೆ. 28 ರೊಳಗೆ ಅರ್ಜಿ  ಆಹ್ವಾನಿಸಲಾಗಿದೆ.

ಆಸಕ್ತ ಮಹಿಳೆಯರು ನಿಗದಿತ ನಮೂನೆಯ ಅರ್ಜಿ ಪಡೆದು ತಾಲೂಕು ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿಗಳ ಕಚೇರಿಯಲ್ಲಿ (ತಾಲೂಕು ಪಂಚಾಯತ ಆವರಣ) ಸಲ್ಲಿಸಬೇಕು. ನಿಗದ ವೇಳೆಯ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.