ಕಾಳಗಿ ಪಟ್ಟಣ ಪಂಚಾಯತ್ ಕಾರ್ಯಾಲಯದಿಂದ 2020-21ನೇ ಸಾಲಿನಲ್ಲಿ ಎಸ್.ಎಫ್.ಸಿ. ಮುಕ್ತ ನಿಧಿ ಯೋಜನೆಯ ಅನುದಾನದಡಿದಲ್ಲಿ ಈ ಕೆಳಕಂಡ ಸೌಲಭ್ಯ ಪಡೆಯಲು ಕಾಳಗಿ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಳಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
2020-21ನೇ ಸಾಲಿನ ಎಸ್.ಎಫ್.ಸಿ. ಮುಕ್ತ ನಿಧಿ ಶೇ. 7.25ರ ಅನುದಾನದಡಿ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. 2020-21ನೇ ಸಾಲಿನ ಎಸ್.ಎಫ್.ಸಿ. ಮುಕ್ತ ನಿಧಿ ಶೇ. 5ರ ಅನುದಾನದಡಿ ಅಂಗವಿಕಲರಿಗೆ ಶೌಚಾಲಯ ಕಟ್ಟಲು ಸಹಾಯಧನ ನೀಡಲಾಗುತ್ತಿದೆ. 2020-21ನೇ ಸಾಲಿನ ಎಸ್.ಎಫ್.ಸಿ. ಮುಕ್ತ ನಿಧಿ ಶೇ. 24.10 ಹಾಗೂ ಶೇ. 5ರ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ 2021ರ ಮಾರ್ಚ್ 4 ರೊಳಗಾಗಿ ಅರ್ಜಿ ಕಾಳಗಿ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಾಳಗಿ ಪಟ್ಟಣ ಪಂಚಾಯತ್ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.
ವಿವಿಧ ಕೌಶಲ್ಯ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ 2019-20 ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಿಂದ ಕೆಳಕಂಡ ವಿವಿಧ ಕೌಶಲ್ಯ ತರಬೇತಿಗಾಗಿ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಲೆಕ್ಕಶಾಸ್ತ್ರ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೊಗ್ರಾಮ್, ಕಾಲ್ ಸೆಂಟರ್ ತರಬೇತಿ ಹಾಗೂ ಫ್ಯಾಶನ್ ಡಿಸೈನ್ ಟೈಲರಿಂಗ್ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪಡಿತರ ಚೀಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರಗಳನ್ನು ಲಗತ್ತಿಸಿ 2021ರ ಮಾರ್ಚ್ 3 ರೊಳಗಾಗಿ ಕಲಬುರಗಿಯ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278660ಗೆ ಸಂಪರ್ಕಿಸಲು ಕೋರಲಾಗಿದೆ.
Share your comments