ಕಲಬುರಗಿ ನಗರದ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ದಿಂದ ನವೆಂಬರ್ 1ರಿಂದ 13ರವರೆಗೆ ಮಹಿಳೆಯರಿಗೆ 13 ದಿನಗಳ ಕಾಲ ಉಚಿತವಾಗಿ ಕೃತಕ ಆಭರಣ ತಯಾರಿಕೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕಲಬುರಗಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಭಾಗದ 18ರಿಂದ 45 ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಮಯದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ ಹಾಗೂ ಇತ್ತೀಚಿನ 5 ಭಾವಚಿತ್ರ ದಾಖಲಾತಿಗಳೊಂದಿಗೆ ನ 1ರಂದು ಬೆಳಿಗ್ಗೆ 10ಕ್ಕೆ ತರಬೇತಿ ಸಂಸ್ಥೆ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು 92436 02888 ಸಂಪರ್ಕಿಸಲು ಕೋರಲಾಗಿದೆ.
ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಅಹ್ವಾನ
2020–21ನೇ ಸಾಲಿನಲ್ಲಿ ಬಿ.ಇ., ಬಿ.ಟೆಕ್, ಬಿ.ಬಿ.ಎ., ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಎಸ್ಸಿ. ನರ್ಸಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‌ಗಳಲ್ಲಿ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.ksb.gov.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಡಿಸೆಂಬರ್ 31ರೊಳಗಾಗಿ ಅರ್ಜಿ ಸಲ್ಲಿಸಿದ ನಂತರ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಾಜಿ ಸೈನಿಕರ ಮಕ್ಕಳು ಮೂಲ ದಾಖಲೆಗಳೊಂದಿಗೆ ಇಲಾಖೆ ಉಪನಿರ್ದೇಶಕರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧದ ಆವರಣದಲ್ಲಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿ 08472–225003ಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.
Share your comments