News

ಆರ್ಯ ವೈಶ್ಯ ಸಮುದಾಯದವರಿಗೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

08 October, 2020 8:54 AM IST By:

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಅರ್ಹ ಅಭ್ಯರ್ಥಿಗಳು ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದವರಾಗಿರಬೇಕು. “ನಮೂನೆ-ಜಿ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು. ಅರ್ಜಿದಾರರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು.

       ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಇಂಜಿನೀಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿ.ಇ.ಟಿ./ ನೀಟ್ (C.E.T/NEET) ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಆಧಾರ್‍ಗೆ ಜೋಡಣೆಯಾಗಿರಬೇಕು. ಅರ್ಹ ಅಭ್ಯರ್ಥಿಗಳು ಇಲಾಖೆಯ www.kacdc.karnataka.gov.in  ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ 2020ರ ನವೆಂಬರ್ 15 ರೊಳಗಾಗಿ ಅರ್ಜಿ ಸಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ +919448451111, ಇ-ಮೇಲ್ support.kacdc@karnataka.gov.in ಗೆ ಸಂಪರ್ಕಿಸಬೇಕು. ಯೋಜನೆಗಳ ಮಾರ್ಗಸೂಚಿ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಮತ್ತಿತರ ವಿವರಗಳನ್ನು ನಿಗಮದ ವೆಬ್‍ಸೈಟ್‍ದಿಂದ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.