News

ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

15 November, 2020 6:36 AM IST By:

ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಆಧಾರ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. 

ಅರ್ಹ ನಿರುದ್ಯೋಗಿ ವಿಕಲಚೇತನ ಫಲಾನುಭವಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬೇಕು. ವಯೋಮಿತಿ  ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು. ಫಲಾನುಭವಿಗಳು ಶೇ. 40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇರಬೇಕು. ಅರ್ಜಿದಾರರು ಕನಿಷ್ಠ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಾಗಿರಬೇಕು. ಈ ಕುರಿತು ವಾಸಸ್ಥಳ ಲಗತ್ತಿಸಬೇಕು. ಅರ್ಜಿದಾರರು ಬ್ಯಾಂಕ್‍ಗಳಿಗೆ ಹಾಗೂ ಸರ್ಕಾರಕ್ಕೆ ಈ ಹಿಂದೆ ಸುಸ್ತಿದಾರರಾಗಿರಬಾರದು. ಫಲಾನುಭವಿಗಳ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 11,500 ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 24,000 ರೂ. ಗಳನ್ನು ಮೀರಬಾರದು.

        ಅರ್ಹ ವಿಕಲಚೇತನರು ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದ ಆದಾಯ ಪ್ರಮಾಣಪತ್ರ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿ, ಆದಾಯ ಪ್ರಮಾಣಪತ್ರ, ಅಂಗವಿಕಲರ ಗುರುತೀನ ಚೀಟಿ ಅಥವಾ ಯು.ಡಿ.ಐ.ಡಿ.ಯನ್ನು  ಲಗತ್ತಿಸಿ  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 2020ರ ಡಿಸೆಂಬರ್ 2 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.     ತೀವ್ರ ಬುದ್ದಿಮಾಂದ್ಯತೆ ಇರುವವರನ್ನು ಹೊರತುಪಡಿಸಿ ಇತರೆ ವಿಕಲಚೇತನರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.