News

ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

20 February, 2021 5:59 PM IST By:

2020-21 ನೇ ಸಾಲಿಗೆ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ 2 ವಿದ್ಯುತ್‍ಮಗ್ಗ ಯೋಜನೆಯಡಿ ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇಶವಿರುವ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಘಟಕದ ವೆಚ್ಚ 3,00,000 ರೂ. ಗಳಾಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ (ಬ್ಯಾಂಕ್) ಸಾಲ ಪಡೆದು ನಂತರ ಯಂತ್ರೋಪಕರಣಗಳನ್ನು ಖರೀದಿಸಿ ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.90 ರಷ್ಟು ಸಹಾಯಧನವನ್ನು ಸಂಬಂಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಲಾಗುವುದು. ಆಸಕ್ತಿಯುಳ್ಳ ಫಲಾನುಭವಿಗಳು 2021ರ ಫೆಬ್ರವರಿ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎರಡನೇ ಮಹಡಿ, ಕೊಠಡಿ ಸಂಖ್ಯೆ 15, ಮಿನಿ ವಿಧಾನ ಸೌಧ, ಕಲಬುರಗಿ-585102 ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08472-278629ಗೆ ಸಂಪರ್ಕಿಸಲು ಕೋರಲಾಗಿದೆ.