News

ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ ರೈತರಿಂದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

13 June, 2021 10:30 AM IST By:
farmer

ಕೃಷಿ ಕ್ಷೇತ್ರದಲ್ಲಿ ಹೊಸ ಸಾಧನೆ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿದ ಉಡುಪಿ ಜಿಲ್ಲೆಯ ರೈತರಿಂದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿವರ್ಷ ರೈತ ಸಮುದಾಯಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ರಾಜ್ಯದ ಎಲ್ಲಾ ಕೃಷಿ ಇಲಾಖೆಯ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಿ ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ ತಿಂಗಳ ಜೂನ್ 20 ಕೊನೆಯ ದಿನವಾಗಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆ ರೈತರ ಸಾಧನೆಗಿಂತ ಭಿನ್ನವಾಗಿರಬೇಕು.  ಇನ್ನಿತರ ರೈತರಿಗೆ ಆದರ್ಶವಾಗಿರಬೇಕು. ಹಾಗೂ ಅನುಕೂಲವಾಗಿರಬೇಕು ಹಾಗೂ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಬಯಸುವ ರೈತರು, ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ಪಡೆದು ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಜೂನ್ 20ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೃಷಿ ಪಂಡಿತ ಪ್ರಶಸ್ತಿಗಾಗಿ ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರಿಂದ ಮಂಗಳೂರು ಕೃಷಿ ಇಲಾಖೆಯ ಅರ್ಜಿ ಆಹ್ವಾನಿಸಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಅರ್ಜಿದಾರರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೆ ಅವರ ಸಂಶೋಧನೆಗಳು/ ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು, ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತರು ತಮ್ಮ ನಾಮ ನಿರ್ದೇಶನಗಳನ್ನು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜುಲೈ 20ರೊಳಗೆ ಆಯಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಲು ಕೋರಿದೆ. ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಯವೆ ಅಂತಿಮ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕ ಕಚೇರಿ ದೂರವಾಣಿ ಸಂಖ್ಯೆ 0824-2423601ಗೆ ಸಂಪರ್ಕಿಸಲು ಕೋರಲಾಗಿದೆ.