1. ಸುದ್ದಿಗಳು

ರಿಯಾಯ್ತಿ ದರದಲ್ಲಿ ರೈತರಿಗೆ ತಾಡಪತ್ರಿ ವಿತರಿಸಲು ರೈತರಿಂದ ಅರ್ಜಿ ಆಹ್ವಾನ

ಹಾವೇರಿ ತಾಲೂಕಿನ ಗುತ್ತಲ ರೈತ ಸಂಪರ್ಕ ಕೇಂದ್ರಗಳ ಮೂಲಕ 2021-22ನೇ ಸಾಲಿನ ಕೃಷಿ ಇಲಾಖೆಯ ರಿಯಾಯ್ತಿ ದರದಲ್ಲಿ ರೈತರಿಗೆ ತಾಡಪತ್ರಿಗಳನ್ನು ವಿತರಿಸಲ ತೀರ್ಮಾನಿಸಿದ್ದು, ಸದುಪಯೋಗ  ಪಡಿಸಿಕೊಳ್ಳುವಂತೆ ಕೃಷಿ ಅಧಿಕಾರಿ ಪುಟ್ಟರಾಜ ಹಾವನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ತಾಡಪತ್ರಿಗಳನ್ನು ಪಡೆಯಲಿಚ್ಚಿಸುವ ರೈತರು ಆಧಾರ್ ಕಾರ್ಡ್, ಜಮೀನಿನ ಉತಾರ, ಬ್ಯಾಂಕ್ ಪಾಸ್ ಬುಕ್ ನ ಝರಾಕ್ಸ್ ಪ್ರತಿಯೊಂದಿಗೆ ಅರ್ಜಿಗಳನ್ನು ಪಟ್ಟಣದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 18 ರೊಳಗೆ  ಸಲ್ಲಿಸಬೇಕು. ರೈತರು ಸದರಿ ಯೋಜನೆಯಡಿ ಸವಲತ್ತು  ಪಡೆಯಬಹುದು. ಈ ಹಿಂದೆ ತಾಡಪತ್ರಿಗಳನ್ನು ಪಡೆದ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ತಾಡಪತ್ರಿಗಳನ್ನು ಲಾಟರಿ ಎತ್ತುವ ಮೂಲಕ ಆಯ್ಕೆ ನಡೆಸಲಾಗುವುದು. ಆಯ್ಕೆಯಾದ ರೈತ ಫಲಾನುಭವಿಗಳಿಗೆ ಸೆಪ್ಟೆಂಬರ್ 23  ರಿಂದ ಸೆಪ್ಟೆಂಬರ್ 30 ರವರೆಗೆ ಹಂಚಿಕೆ ಮಾಡಲಾಗುವುದು. ಹಂಚಿಕೆಮಾಡುವ ಕೊನೆಯ ದಿನಾಂಕದೊಳಗೆ ಫಲಾನುಭವಿಗಳು ತಮ್ಮ ತಾಡಪತ್ರಿಗಳನ್ನು ತೆಗೆದುಕೊಂಡು ಹೋಗತಕ್ಕದ್ದು, ಇಲ್ಲವಾದಲ್ಲಿ ಅವಶ್ಯಕತೆ ಇಧ್ದ ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರರೆ.

ದಾಖಲೆಗಳು ಏನೇನು ಬೇಕು:

ಅರ್ಜಿಯೊಂದಿಗೆ ರೈತರ ಆಧಾರ್ ಕಾರ್ಡಿನ ನಕಲು ಪ್ರತಿ, ಖಾತೆ ಉತಾರ, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ,  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಅರ್ಜಿ ಸಲ್ಲಿಸುವಾಗ ಇತ್ತೀಚಿನ ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯನ್ನು ಸಲ್ಲಿಸಬೇಕು.

ಪಿಎಂ ಕೃಷಿ ಸಿಂಚಾಯಿ ಯೋಜನೆಗೆ ಅರ್ಜಿ ಆಹ್ವಾನ

2021-22ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ಹಾಗೂ ತುಂತುರು ನೀರಾವರಿ ಘಟಕವನ್ನು ಶೇ. 90 ರ ರಿಯಾಯ್ತಿಯಲ್ಲಿ 2 ಹೆಕ್ಟೇರ್ ವರೆಗೆ ಮತ್ತು 2 ರಿಂದ 5 ಹೆಕ್ಟೇರ್ ವರೆಗೆ ಶೇ. 45 ರಷ್ಟು ಸಹಾಯಧನದ ಸವಲತ್ತು ಪಡೆಯಲು ಅವಕಾಶವಿದ್ದು, ಎಲ್ಲಾ ವರ್ಗದ (ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ರೈತರಿಂದ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ರೈತರು ಸಂಬಂಧಪಟ್ಟ ಹೋಬಗಳಿಯ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿಯೊಂದಿಗೆ ಪಹಣಿ, 20 ರೂಪಾಯಿ ಛಾಪಾಕಾಗದ, ಕೊಳವೆ ಬಾವಿ ದೃಢೀಕರಣ,  ನೀರಿನ ಲಭ್ಯತೆ ದೃಢೀಕರಣ, ಬೆಳೆ ದೃಢಿಕರಣ ಪತ್ರ, ಇತರ ದಾಖಲೆಗಳನ್ನು ಕೋರಲಾಗಿದೆ. ರೈತ ಸಂಪರ್ಕ ಕೇಂದ್ರದಲ್ಲಿ ಕೆ-ಕಿಸಾನ್ ತಂತ್ರಾಂಶದಲ್ಲಿ ನಮೂದಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಜೇಷ್ಠತಾ ಪಟ್ಟಿಯ ಆಧಾರದ ಮೇಲೆ ರೈತರು ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಕೃಷಿ ಸಿಂಚಾಯಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನಿ ಸಂಪರ್ಕಿಸಲು ಕೋರಲಾಗಿದೆ.

Published On: 10 September 2021, 11:28 PM English Summary: Application invited from farmers to distribute tadapati to farmers

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.