1. ಸುದ್ದಿಗಳು

ಹೆಚ್ಚು ಇಳುವರಿ ಪಡೆದ ಭತ್ತ ಬೆಳೆಗಾರರಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

paddy

ಕಡಿಮೆ ಜಮೀನಿನಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಮಂಗಳೂರು ಜಿಲ್ಲೆಯ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮನೋಭಾವ ಬೆಳೆಸುವ ಉದ್ದೇಶದಿಂದ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು, ಜಿಲ್ಲೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತರು ಕನಿಷ್ಟ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿರಬೇಕು. ಸ್ವಂತ ಅಥವಾ ಸಾಮಾನ್ಯ ವ್ಯವಹಾರಿಕ ಅಧಿಕಾರ ಮಾಲಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿವವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0824-2423601 ಗೆ ಸಂಪರ್ಕಿಸಬಹುದು.

ಮೀನು ಕೃಷಿ ಕೊಳ ನಿರ್ಮಾಣಕ್ಕೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಪ್ರಧಾನಮಂತ್ರಿ ಮತ್ಸ್ಸ್ಯ ಸಂಪದ ಯೋಜನೆಯಡಿ ಹೊಸದಾಗಿ ಮೀನು ಕೃಷಿ ಕೊಳ ನಿರ್ಮಾಣ ಮಾಡಲು ಇಚ್ಚಿಸುವವರು ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್  ಘಟಕಗಳ ನಿರ್ಮಾಣ, ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ, ಮೀನು ಸಾಗಣೆ ಮತ್ತು ಮಾರಾಟ ವಾಹನಗಳ ಖರೀದಿಗೆ ಸಹಾಯಧನ ಮತ್ತಿತರ ಚಟುವಟಿಕೆಗಳ ಸದುಪಯೋಗ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕ ಗಣೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಲಮೂಲಗಳು ಇರುವ ಕಡೆಗಳಲ್ಲಿ ಮೀನು ಕೃಷಿ ಪ್ರಮುಖ ಆರ್ಥಿಕ ಬೇಸಾಯವಾಗಿದೆ. ಈ ಉಧ್ಯಮದ ಮೇಲೆ ಈಗಲೂ ಸಹ ಸಾಕಷ್ಟು ಕುಟುಂಬಗಳು ಅವಲಂಬಿಸಿವೆ. ದೊಡ್ಡ ದೊಡ್ಡ ಕೆರೆಗಳಲ್ಲಿ, ಜಲಾಶಯಗಳಲ್ಲಿ ಮೀನುಮರಿಗಳನ್ನು ಬಿಟ್ಟು ವ್ಯಾಪಾರ ಮಾಡುವುದು ಒಂದೆಡೆಯಾದರೆ ಮೀನು  ಕೃಷಿ ಕೊಳ ನಿರ್ಮಾಣ ಮಾಡಿ ರೈತರು ಆದಾಯ ಗಳಿಸಿಕೊಳ್ಳಬಹುದು. ಸಣ್ಣ, ಮಧ್ಯಮ ರೈತರು ಸಹ ತಮ್ಮ ಹೊಲಗಳಲ್ಲಿ ಅಥವಾ ತಮ್ಮ ಹೊಲದಲ್ಲಿರುವ ತಗ್ಗುಪ್ರದೇಶಗಳಲ್ಲಿ ಕೊಳಗಳನ್ನು ನಿರ್ಮಾಣ ಮಾಡಿ ಮೀನು ಮರಿಗಳನ್ನು ಸಾಕಿ ಆರ್ಥಿಕವಾಗಿ ಸಬಲರಾಗಬಹುದು.

Published On: 15 June 2021, 04:26 PM English Summary: Application invited from farmers who grew more paddy

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.