1. ಸುದ್ದಿಗಳು

ಅರ್ಹ ಮೀನುಗಾರರಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿನ ಮೀನುಗಾರಿಕಾ ಇಲಾಖೆಯ ರಾಜ್ಯ ವಲಯದ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ ನಿರ್ದೇಶಕರು ಉಡುಪಿ, ಕುಂದಾಪುರ, ಕಾರ್ಕಳ ಕಚೇರಿಗೆ ಸಲ್ಲಿಸಬಹುದು ಎಂದು ಮೀನುಗಾರಿಕಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳಡಿ ಮೀನುಗಾರರಿಂದ ಅರ್ಜಿ ಆಹ್ವಾನ:

ಮೀನುಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಹಾಗೂ ಇತರೆ ವಿವಿಧ ಯೋಜನೆಗಳಡಿ ಹಾವೇರಿ ಜಿಲ್ಲೆಯ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೆ.30ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಮೀನುಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 24 September 2020, 08:49 AM English Summary: Application invited from fisheries

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.