News

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಕಾನೂನು ಪದವೀಧದರಿಂದ ಅರ್ಜಿ ಆಹ್ವಾನ

18 June, 2021 8:28 PM IST By:

ಸಮಾಜ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ 2 ವರ್ಷಗಳ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು. ತಹಶೀಲ್ದಾರರಿಂದ ಪಡೆದ  ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅಭ್ಯರ್ಥಿಗಳ ವಯೋಮಿತಿ 40 ವರ್ಷ ಮೀರಿರಬಾರದು. ಬಾರ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು. ಹಿರಿಯ ನ್ಯಾಯವಾದಿಗಳ ಬಳಿ ತರಬೇತಿ ನಿಯೋಜನೆಗೊಂಡಿರುವ ಬಗ್ಗೆ ದೃಢೀಕರಣ ಸಲ್ಲಿಸಬೇಕು. ರಾಜ್ಯ ಬಾರ್‌ಕೌನ್ಸಿಲ್‌ನಲ್ಲಿ ನೋಂದಣಿಯಾಗಿ 2 ವರ್ಷದೊಳಗಿರಬೇಕು.

2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರನ್ನು ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ 500.02 ಲಕ್ಷ ರೂ. ಗಳನ್ನು ಒದಗಿಸಲಾಗಿದೆ. ದಿನಾಂಕ: 28-04-2021 ರಿಂದ ಕೋವಿಡ್-19ರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವ ಹಾಗೂ ತಾಂತ್ರಿಕ ತೊಂದರೆಗಳಿAದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು ತಂತ್ರಾAಶ ತೆರೆದಿರುವುದಿಲ್ಲ. ಆದ್ದರಿಂದ ವೃತ್ತಿ ತರಬೇತಿಗೆ ಈ ಕೆಳಕಂಡAತೆ ವೇಳಾಪಟ್ಟಿಯನ್ನು ಮಾರ್ಪಡಿಸಲಾಗಿದೆ.

2021ರ ಜುಲೈ 1 ರಿಂದ 2021ರ ಆಗಸ್ಟ್ 14ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತದೆ.     2021ರ ಆಗಸ್ಟ್ 16 ರಿಂದ 31ರವರೆಗೆ ಅರ್ಜಿ ಪರಿಶೀಲನೆ ಮತ್ತು ಆಯ್ಕೆ ಪ್ರಕ್ರಿಯೆ ನಡೆಯಲಿದೆ. 2021ರ ಅಕ್ಟೋಬರ್ 1 ರಿಂದ ವೃತ್ತಿ ತರಬೇತಿ ಪ್ರಾರಂಭಿಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆಗಸ್ಟ್ 14 ಕೊನೆಯ ದಿನವಾಗಿದೆ. ಆಯ್ಕೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ 10,000 ರೂ.ಗಳ ಮಾಸಿಕ ತರಬೇತಿ ಭತ್ಯೆ ನೀಡಲಾಗುತ್ತದೆ. 

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2021ರ ಆಗಸ್ಟ್ 14 ರೊಳಗಾಗಿ ಕಚೇರಿಯಲ್ಲಿ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.